ಸಾಲದ ಆ್ಯಪ್ ಮೂಲಕ ವಂಚನೆ: ಸಿಸಿಬಿ ಪೊಲೀಸರಿಂದ ಮೂವರ ಬಂಧನ

ಆ್ಯಪ್ ಮೂಲಕ ಸಾಲ ನೀಡಿ ಅಧಿಕ ಬಡ್ಡಿ ವಿಧಿಸಿ ತೊಂದರೆ ಕೊಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಆ್ಯಪ್ ಮೂಲಕ ಸಾಲ ನೀಡಿ ಅಧಿಕ ಬಡ್ಡಿ ವಿಧಿಸಿ ತೊಂದರೆ ಕೊಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಚೀನಾ ದೇಶದ ಪ್ರಜೆಗಳು ಭಾಗಿಯಾಗಿರುವುದು ತಿಳಿದು ಬಂದಿದೆ, ಶೀಘ್ರವೇ ಅವರನ್ನು ಬಂಧಿಸುವುದಾಗಿ ಸಿಸಿಬಿ ಪೊಲೀಸರು ತಿಳಿಸಿದ್ದಾರೆ. 

ಸಾಲ ನೀಡುವುದಾಗಿ ಆಮಿಷ ಒಡ್ಡುವ ಕೆಲವು ಅನಧಿಕೃತ ಮೊಬೈಲ್‌ ಆ್ಯಪ್‌ಗಳ ಜಾಲಕ್ಕೆ ಬಲಿಯಾಗಬಾರದು ಎಂದು ಆರ್‌ಬಿಐ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಸಾಲ ಕೊಡುವುದಾಗಿ ಹೇಳುವ ಇಂತಹ ಆ್ಯಪ್‌ಗಳ ಸಂಖ್ಯೆ ಹೆಚ್ಚುತ್ತಿದೆ ಎಂದೂ ಅದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com