ರಾಜ್ಯದಲ್ಲಿ ತಗ್ಗಿದ ಕೊರೋನಾ ಅಬ್ಬರ: ಇಂದು ಬೆಂಗಳೂರಿನಲ್ಲಿ 309 ಸೇರಿ 653 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಸೋಮವಾರ 653 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,16,909ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಸೋಮವಾರ 653 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,16,909ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಎಂಟು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,070ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ಬೆಂಗಳೂರಿನಲ್ಲಿ 309 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ನಗರದಲ್ಲಿ ಸೋಂಕಿನಿಂದ ಐವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 1178 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,92,273ಕ್ಕೆ ಏರಿಕೆಯಾಗಿದೆ. ಇನ್ನು 12,547 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 205 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com