ಹಂಪಿಯತ್ತ ಮುಖ ಮಾಡಿದ ಪ್ರವಾಸಿಗರು: ಮೊಬೈಲ್ ವ್ಯಾನ್ ಮೂಲಕ ಕೋವಿಡ್ ಪರೀಕ್ಷೆಗೆ ಮುಂದಾದ ಅಧಿಕಾರಿಗಳು

ರಾಜ್ಯದಲ್ಲಿ ಕೊರೋನಾ ಅಬ್ಬರ ಇಳಿಯುತ್ತಿದ್ದಂತೆಯೇ ಐತಿಹಾಸಿಕ ಪ್ರವಾಸಿ ತಾಣವಾಗಿರುವ ಹಂಪಿಯತ್ತ ಪ್ರವಾಸಿಗರು ಮುಖ ಮಾಡಿದ್ದು, ದಿನ ಕಳೆಯುತ್ತಿದಂತೆಯೇ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತ ಮಂಡಳಿಯ ಅಧಿಕಾರಿಗಳು ಮೊಬೈಲ್ ಕೋವಿಡ್ ವ್ಯಾನ್ ಮೂಲಕ ಕೊರೋನಾ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಳ್ಳಾರಿ: ರಾಜ್ಯದಲ್ಲಿ ಕೊರೋನಾ ಅಬ್ಬರ ಇಳಿಯುತ್ತಿದ್ದಂತೆಯೇ ಐತಿಹಾಸಿಕ ಪ್ರವಾಸಿ ತಾಣವಾಗಿರುವ ಹಂಪಿಯತ್ತ ಪ್ರವಾಸಿಗರು ಮುಖ ಮಾಡಿದ್ದು, ದಿನ ಕಳೆಯುತ್ತಿದಂತೆಯೇ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತ ಮಂಡಳಿಯ ಅಧಿಕಾರಿಗಳು ಮೊಬೈಲ್ ಕೋವಿಡ್ ವ್ಯಾನ್ ಮೂಲಕ ಕೊರೋನಾ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. 

ಪ್ರತೀನಿತ್ಯ ಹಂಪಿಗೆ 2,500ಕ್ಕೂ ಹೆಚ್ಚು ಮಂದಿ ಆಗಮಿಸುತ್ತಿದ್ದಾರೆ. ಪ್ರಮುಖವಾಗಿ ವಾರಾಂತ್ಯದ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮೊಬೈಲ್ ಟೆಸ್ಟಿಂಗ್ ಯುನಿಟ್ಸ್ ಗಳನ್ನು ಸ್ಥಾಪಿಸಿ ಪ್ರವಾಸಿಗರನ್ನು ತಪಾಸಣೆ ನಡೆಸುವ ಕಾರ್ಯಗಳನ್ನು ಮಾಡಲಾಗುತ್ತಿದೆ. ಆರೋಗ್ಯ ಕಾರ್ಯಕರ್ತರು ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಸ್ವಾಬ್ ಸಂಗ್ರಹಿಸಿ ಪರೀಕ್ಷೆ ನಡೆಸಲಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಇನ್ನು ಬಳ್ಳಾರಿ ಕೂಡ ದಿನ ಕಳೆಯುತ್ತಿದ್ದಂತೆಯೇ ಕೊರೋನಾ ಮುಕ್ತ ಜಿಲ್ಲೆಯತ್ತ ದಾಪು ಗಾಲಿಡುತ್ತಿದೆ. ಆದರೂ, ಪರಿಸ್ಥಿತಿ ನಿಭಾಯಿಸುವುದು ಸವಾಲಾಗಿಯೇ ಇದೆ. ಬ್ರಿಟನ್ ನಿಂದ ಕೆಲ ದಿನಗಳ ಹಿಂದಷ್ಟೇ ಜಿಲ್ಲೆಗೆ 17 ಮಂದಿ ಆಗಮಿಸಿದ್ದು, ಇದರಲ್ಲಿ ಓರ್ವ ವ್ಯಕ್ತಿಯ ಮಾಹಿತಿ ಪತ್ತೆಯಾಗಿಲ್ಲ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ವಿದೇಶಿಗರ ಭೇಟಿ ಸಂಖ್ಯೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com