ಗೋಮಾಂಸ ತಿನ್ನಬೇಡಿ, ಮಾರಬೇಡಿ ಎಂದು ಕಾಯ್ದೆಯಲ್ಲಿ ಎಲ್ಲೂ ನಿರ್ಬಂಧ ವಿಧಿಸಿಲ್ಲ: ಸಚಿವ ಜೆ.ಸಿ. ಮಾಧುಸ್ವಾಮಿ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಕ್ಕೆ (ಗೋಹತ್ಯೆ ನಿಷೇಧ ಮಸೂದೆ) ವಿಧಾನಪರಿಷತ್‌ನಲ್ಲಿ ತಡೆಯಾಗಿದ್ದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಚಿವ ಸಂಪುಟ ಸಭೆ ಅಸ್ತು ಎಂದಿದೆ.
ಸಚಿವ ಮಾಧುಸ್ವಾಮಿ
ಸಚಿವ ಮಾಧುಸ್ವಾಮಿ

ಬೆಂಗಳೂರು: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಕ್ಕೆ (ಗೋಹತ್ಯೆ ನಿಷೇಧ ಮಸೂದೆ) ವಿಧಾನಪರಿಷತ್‌ನಲ್ಲಿ ತಡೆಯಾಗಿದ್ದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಚಿವ  ಸಂಪುಟ ಸಭೆ ಅಸ್ತು ಎಂದಿದೆ.

ಗೋಹತ್ಯೆ ನಿಷೇಧ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಮಹತ್ವದ ತೀರ್ಮಾನವನ್ನು ಸಚಿವ ಸಂಪುಟ ಸಭೆ ಕೈಗೊಂಡಿದೆ. ಮಂಗಳವಾರ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲು ತೀರ್ಮಾನಿಸಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ  ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿಧೇಯಕಕ್ಕೆ ತಕ್ಷಣವೇ ಜೀವ ನೀಡುವ ಉದ್ದೇಶದಿಂದ ಸುಗ್ರೀವಾಜ್ಞೆ ತರಲು ತೀರ್ಮಾನಿಸಲಾಗಿದೆ.ರಾಜ್ಯಪಾಲರ ಒಪ್ಪಿಗೆಗಾಗಿ ಮಂಗಳವಾರವೇ ಕಳುಹಿಸಿ ಕೊಡಲಿದೆ. ರಾಜ್ಯಪಾಲರು ಸಹಿ ಆಗುತ್ತಿದ್ದಂತೆ ತಕ್ಷಣವೇ ಸುಗ್ರೀವಾಜ್ಞೆ ಅನುಷ್ಠಾನಗೊಳಿಸಲು ಸಭೆಯಲ್ಲಿ  ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ,ರಾಜ್ಯದಲ್ಲಿ ಗೋಹತ್ಯೆ ನಿಷೇಧ ಸಂಬಂಧ ಹೊಸ ಕಾಯ್ದೆ ಜಾರಿಯಾದರೆ ಎಮ್ಮೆ, ಕೋಣದ ಮಾಂಸ ಮಾರಾಟಕ್ಕೆ ಸಮಸ್ಯೆಯಾಗಲಿದೆ ಎಂಬ ಭಾವನೆ ಇದೆ. ಆದರೆ,ಇದು ಸತ್ಯಕ್ಕೆ ದೂರವಾದುದು. ಎಮ್ಮೆ, ಕೋಣದ ಮಾಂಸ  ಮಾರಾಟಕ್ಕೆ ಯಾವುದೇ ನಿಷೇಧ ಹೇರಿಲ್ಲ. ಹಸುವಿನ ವಧೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.ಅಲ್ಲದೇ,ಚರ್ಮೋದ್ಯಮಕ್ಕೂ ಹೊಸ ಕಾಯ್ದೆಯಿಂದ ಸಮಸ್ಯೆಯಾಗುವುದಿಲ್ಲ ಎಂದು ಮಾಹಿತಿ ನೀಡಿದರು.

1964ರ ಗೋಹತ್ಯೆ ನಿಷೇಧ ಕಾಯ್ದೆಯ ಪ್ರಕಾರ, 12 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಹಸು, ಎಮ್ಮೆ, ಕೋಣಗಳನ್ನು ಮಾಂಸಕ್ಕಾಗಿ ವಧಿಸಲು ಅವಕಾಶವಿತ್ತು. ಈಗಿನ ತಿದ್ದುಪಡಿ ಮಸೂದೆಯ ಪ್ರಕಾರ, ಹಸು ಮತ್ತು ಎತ್ತುಗಳನ್ನು ಜೀವಿತಾವಧಿಯವರೆಗೂ ವಧಿಸಲು ಅವಕಾಶವಿಲ್ಲ. ಎಮ್ಮೆ ಮತ್ತು ಕೋಣಗಳನ್ನು 13 ವರ್ಷದ ಬಳಿಕ ವಧಿಸಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.

ಗೋಹತ್ಯೆ ನಿಷೇಧ ಕಾಯ್ದೆಯ ತಿದ್ದುಪಡಿ. ಮಸೂದೆ‌ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲು ಸೋಮವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸುಗ್ರೀವಾಜ್ಞೆಯ ಪ್ರತಿಯನ್ನು ರಾಜ್ಯಪಾಲರ ಒಪ್ಪಿಗೆಗಾಗಿ ಮಂಗಳವಾರ ರಾಜಭವನಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com