ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿಗಳ ಮನೆಗಳ ಮೇಲೆ ದಿಢೀರ್ ಪೊಲೀಸ್ ದಾಳಿ, ವ್ಯಾಪಕ ಶೋಧ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ಮಾಡಿದ್ದು, ವ್ಯಾಪಕ ಶೋಧ ನಡೆಸಿದ್ದಾರೆ.
ರೌಡಿಗಳ ಮನೆಗಳ ಮೇಲೆ ಪೊಲೀಸ್ ದಾಳಿ
ರೌಡಿಗಳ ಮನೆಗಳ ಮೇಲೆ ಪೊಲೀಸ್ ದಾಳಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ಮಾಡಿದ್ದು, ವ್ಯಾಪಕ ಶೋಧ ನಡೆಸಿದ್ದಾರೆ.

ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗುತ್ತಿದ್ದು, ಪಶ್ಚಿಮ ವಿಭಾಗದ ವ್ಯಾಪ್ತಿಯಲ್ಲಿನ ರೌಡಿಗಳ ನಿವಾಸ, ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ಶಂಕಾಸ್ಪದ ವ್ಯಕ್ತಿಗಳು ಮತ್ತು ಚಟುವಟಿಕಳು ಇರುವಿಕೆಯ ಕುರಿತು ಪೊಲೀಸರು ಶೋಧ ನಡೆಸಿದ್ದಾರೆ. 

ಇತ್ತೀಚೆಗಷ್ಟೇ ಹೊಸ ರೂಪಾಂತರದ ಕೊರೋನಾ ವೈರಸ್​ ಹರಡುವಿಕೆ ತಡೆಯುವ ಉದ್ದೇಶದಿಂದ ಈ ಹೊಸ ವರ್ಷಾಚರಣೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ನಗರದಲ್ಲಿ ಡಿಸೆಂಬರ್ 31ರಂದು ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದರು. 

'ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ಸೆಕ್ಷನ್​ 144 ಜಾರಿಯಲ್ಲಿರಲಿದೆ. ರಾಜಧಾನಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಇಡೀ ಬೆಂಗಳೂರಿನಲ್ಲಿ ನಾಕಾಬಂದಿ ಇರಲಿದ್ದು, ಭದ್ರತೆಗಾಗಿ 10  ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಗೆ ನಿಷೇಧ ಇರಲಿದ್ದು, ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಆದರೆ, ಖಾಸಗಿ ಸ್ಥಳಗಳಲ್ಲಿ ಆಚರಣೆಗೆ ಅವಕಾಶ ನೀಡಲಾಗಿದೆ. ಪಬ್​ಗಳಲ್ಲಿ ಈವೆಂಟ್​, ಶೋ ನಡೆಸುವಂತಿಲ್ಲ ಹಾಗೂ ವಿಶೇಷ ಡಿಜೆ ವ್ಯವಸ್ಥೆ  ಮಾಡುವಂತಿಲ್ಲ. ಹೊಟೇಲ್​ಗಳಲ್ಲಿ ಮಾರ್ಗಸೂಚಿ ಪಾಲಿಸಬೇಕು ಎಂದು ಕಮಲ್ ಪಂತ್ ಹೇಳಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com