ಪಾದರಾಯನಪುರ ರಸ್ತೆಗಳಿಗೆ ಮುಸ್ಲಿಮರ ಹೆಸರು: ಬಿಬಿಎಂಪಿ ಆಯುಕ್ತರಿಗೆ ಸಂಸದ ತೇಜಸ್ವಿ ಸೂರ್ಯ ಪತ್ರ, ತೀವ್ರ ಆಕ್ಷೇಪ

ಪಾದರಾಯನಪುರದ ಅಡ್ಡ ರಸ್ತೆಗಳಿಗೆ ಮುಸ್ಲಿಮರ ಹೆಸರುಗಳನ್ನಿಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ )ತೀರ್ಮಾನಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸಹ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಂಸದ ತೇಜಸ್ವಿ ಸೂರ್ಯ
ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಪಾದರಾಯನಪುರದ ಅಡ್ಡ ರಸ್ತೆಗಳಿಗೆ ಮುಸ್ಲಿಮರ ಹೆಸರುಗಳನ್ನಿಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ತೀರ್ಮಾನಕ್ಕೆ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸಹ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಿಬಿಎಂಪಿ ನಿರ್ಧಾರವನ್ನು ಕಟುವಾಗಿ ಪ್ರಶ್ನಿಸಿ ಆಯುಕ್ತರಿಗೆ ಪತ್ರ ಬರೆದಿರುವ ತೇಜಸ್ವಿ ಸೂರ್ಯ,  "ಪಾದರಾಯನಪುರದ ಕೆಲವು ರಸ್ತೆಗಳಿಗೆ ಕೇವಲ ಮುಸ್ಲಿಂ ಹೆಸರುಗಳ ನಾಮಕರಣಕ್ಕೆ ಪ್ರಸ್ತಾವ ಮಾಡಿರುವ ಬಿಬಿಎಂಪಿ ಯ ನಿರ್ಧಾರವನ್ನು ಸಂಸದರಾದ ಅನಂತ್ ಕುಮಾರ್ ಹೆಗ್ಡೆ ರವರೊಂದಿಗೆ ನಾನು ಖಡಾಖಂಡಿತವಾಗಿ ವಿರೋಧಿಸುತ್ತೇನೆ" ಎಂದು ಹೇಳಿದ್ದಾರೆ.

"ಮುಸ್ಲಿಂ ಬಾಹುಳ್ಯವಿರುವ ಪ್ರದೇಶಗಳಿಗೆ ಮುಸಲ್ಮಾನರ ಹೆಸರುಗಳನ್ನೇ ಶಿಫಾರಸ್ಸು ಮಾಡಿರುವ  ಬಿಬಿಎಂಪಿ ಯ ಈ ನಿರ್ಧಾರವು ಭಾರತ, ಪಾಕಿಸ್ಥಾನದ ವಿಭಜನೆಗೆ ಮೂಲವಾಗಿದ್ದ ದ್ವಿರಾಷ್ಟ್ರ ಸಿದ್ಧಾಂತದ ಪಳಿಯುಳಿಕೆಯಂತಿದೆ" ಎಂದು ಸಂಸದರು ಬಿಬಿಎಂಪಿ ನಡೆಯನ್ನು ಖಂಡಿಸಿದ್ದಾರೆ

"ಈ ಪ್ರಸ್ತಾವಕ್ಕೆ ನನ್ನ ಸಂಪೂರ್ಣ ವಿರೋಧವಿದ್ದು, ನನ್ನ ಆಕ್ಷೇಪವಿದೆ. ಪಾಲಿಕೆಯು ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿದು, ಕೇವಲ ಮುಸ್ಲಿಂ ಹೆಸರುಗಳ ನಾಮಕರಣ ಪ್ರಕ್ರಿಯೆಯನ್ನು ಹಿಂಪಡೆಯಬೇಕು" ಎಂದು ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com