ಬ್ರಿಟನ್ ನಿಂದ ಬರುವವರ ಮೇಲೆ ಕಟ್ಟೆಚ್ಚರ: ವಿಮಾನ ನಿಲ್ದಾಣದಲ್ಲಿ ಸೋಂಕು ತಪಾಸಣೆಗೆ ಐದು ತಂಡಗಳ ನಿಯೋಜನೆ

 ಯುನೈಟೆಡ್ ಕಿಂಗ್ ಡಂನಲ್ಲಿ   ಹೊಸ ರೂಪಾಂತರ ಪಡೆದುಕೊಂಡಿರುವ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವವರ ಮೇಲೆ ಕಣ್ಗಾವಲು ಮತ್ತಷ್ಟು ಬಿಗಿಗೊಳಿಸಲಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಯುನೈಟೆಡ್ ಕಿಂಗ್ ಡಂನಲ್ಲಿ  ಹೊಸ ರೂಪಾಂತರ ಪಡೆದುಕೊಂಡಿರುವ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವವರ ಮೇಲೆ ಕಣ್ಗಾವಲು ಮತ್ತಷ್ಟು ಬಿಗಿಗೊಳಿಸಲಾಗಿದೆ. 

ವಿದೇಶದಿಂದ ಬರುತ್ತಿರುವ ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ೫ ತಂಡಗಳು ಅಹೋರಾತ್ರಿ ಕಾರ್ಯ ನಿರ್ವಹಿಸುತ್ತಿವೆ. ಖಾಸಗಿ ಪ್ರಯೋಗಾಲಯ ಸ್ಥಾಪಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲಗಲೆಯಲ್ಲಿ ಬ್ರಿಟನ್‌ನಿಂದ ಆಗಮಿಸಿದವರ ಪರೀಕ್ಷೆ ನಡೆಸಲಾಗಿದ್ದು, ಇವರ ಕೊರೊನಾ ವರದಿ ನೆಗೆಟೀವ್ ಬಂದಿದ್ದು, ಹೋಂ ಐಸೋಲೇಷನ್‌ನಲ್ಲಿ ಇರಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com