ಕೋವಿಡ್ ರೂಪಾಂತರ ವೈರಾಣುವಿನ ಸವಾಲು ನಮ್ಮೆದುರಿಗಿದ್ದು, ಮನೆಯಲ್ಲಿಯೇ ಹೊಸ ವರ್ಷಾಚರಣೆ ಮಾಡಿ: ಸಿಎಂ ಯಡಿಯೂರಪ್ಪ

ಕೋವಿಡ್ ರೂಪಾಂತರ ವೈರಾಣುವಿನ ಸವಾಲು ನಮ್ಮೆದುರಿಗಿದ್ದು, ಜನರು ಎಲ್ಲಾ ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಸರ್ಕಾರದೊಂದಿಗೆ ಸಹಕರಿಸಬೇಕಾಗಿದೆ ಎಂದು ರಾಜ್ಯದ ಜನತೆಯ ಬಳಿಕ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ. 
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಕೋವಿಡ್ ರೂಪಾಂತರ ವೈರಾಣುವಿನ ಸವಾಲು ನಮ್ಮೆದುರಿಗಿದ್ದು, ಜನರು ಎಲ್ಲಾ ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಸರ್ಕಾರದೊಂದಿಗೆ ಸಹಕರಿಸಬೇಕಾಗಿದೆ ಎಂದು ರಾಜ್ಯದ ಜನತೆಯ ಬಳಿಕ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೋವಿಡ್ ರೂಪಾಂತರ ವೈರಾಣುವಿನ ಸವಾಲು ನಮ್ಮೆದುರಿಗಿದ್ದು, ಜನರು ಎಲ್ಲಾ ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಸರ್ಕಾರದೊಂದಿಗೆ ಸಹಕರಿಸಬೇಕಾಗಿದೆ. ಹೊಸ ವರ್ಷದ ಆಚರಣೆ ನೆಪದಲ್ಲಿ ನಿಯಮಗಳನ್ನು ಉಲ್ಲಂಘಿಸಿ ಅನಗತ್ಯ ತೊಂದರೆಗಳನ್ನು ಆಹ್ವಾನಿಸಬೇಡಿ. ಮನೆಗಳಲ್ಲಿಯೇ ಹೊಸ ವರ್ಷಾಚರಣೆ ಮಾಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆಂದು ಹೇಳಿದ್ದಾರೆ. 

ಈ ನಡುವಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಯಡಿಯೂರಪ್ಪ ಅವರು, ಬ್ರಿಟನ್ ರೂಪಾಂತರಿ ಕೊರೋನಾ ವೈರಸ್ ಆತಂಕ ಹಿನ್ನೆಲೆಯಲ್ಲಿ ನಗರದಲ್ಲಿ ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಜನರ ಆರೋಗ್ಯ ದೃಷ್ಟಿಯಿಂದ ಒಂದು ದಿನ ನಿಯಮ ಪಾಲನೆ ಮಾಡಿ ಎಂದು ಜನರಲ್ಲಿ ವಿನಂತಿಸಿಕೊಳ್ಳುತ್ತೇನೆಂದು ಹೇಳಿದ್ದಾರೆ. ಅಲ್ಲದೆ, ರಾಜ್ಯ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿ, ಎಲ್ಲರಿಗೂ ಸುಖ, ಶಾಂತಿ ನೆಮ್ಮದಿ ತರಲಿ ಎಂದು ಹಾರೈಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com