ಹೊಸ ವರ್ಷದ ಸಂಭ್ರಮದ ಮೇಲೆ ಕೊರೋನಾ ಕರಿನೆರಳು: ಇಂದು ಮಧ್ಯಾಹ್ನ 12 ಗಂಟೆಯಿಂದ ಸಿಲಿಕಾನ್ ಸಿಟಿಯಲ್ಲಿ ನಿಷೇಧಾಜ್ಞೆ ಜಾರಿ

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ, ರೂಪಾಂತರಿ ಕೊರೊನಾ ಹರಡುವಿಕೆಯ ಭೀತಿಯಿಂದಾಗಿ ಇಂದು ಮಧ್ಯಾಹ್ನ 12 ಗಂಟೆಯಿಂದಲೇ ನಗರದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಆದೇಶ ಹೊರಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ, ರೂಪಾಂತರಿ ಕೊರೊನಾ ಹರಡುವಿಕೆಯ ಭೀತಿಯಿಂದಾಗಿ ಇಂದು ಮಧ್ಯಾಹ್ನ 12 ಗಂಟೆಯಿಂದಲೇ ನಗರದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಕೊರೊನಾ ರೋಗ ಹರಡುವುದನ್ನು ನಿಯಂತ್ರಿಸಲು ಪರಿಷ್ಕೃತ ನಿಷೇಧಾಜ್ಞೆ ಆದೇಶವನ್ನು ಜಾರಿಗೊಳಿಸುವುದು ಅನಿವಾರ್ಯ ವಾಗಿದೆ.

ಡಿ. 31ರ ರಾತ್ರಿ ಹೊಸ ವರ್ಷದ ಆಚರಣೆಯ ವೇಳೆ ಹೆಚ್ಚು ಜನ ಸೇರುವುದರಿಂದ ನಿಷೇಧಾಜ್ಞೆ ಆದೇಶದ ಅವಧಿಯನ್ನು ಪರಿಷ್ಕರಿಸುವ ಮೂಲಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತವೆಂದು ಪರಿಗಣಿಸಿದ್ದಾಗಿ ಅವರು ಹೇಳಿದ್ದಾರೆ.

ಜ. 1ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಇರಲಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಲಾಗಿದೆ. ಈ ಮೊದಲು ಡಿ. 31ರ ಸಂಜೆ ಆರು ಗಂಟೆಯಿಂದ ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com