ಗಾಂಧಿ ಕುರಿತು ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದ ಸಂಸದ ಅನಂತ್ ಕುಮಾರ್ ಹೆಗ್ಡೆ

ನಾನು ಮಹಾತ್ಮ ಗಾಂಧಿ ಕುರಿತು ಹೇಳಿಕೆ ನೀಡಿಲ್ಲ. ಆದರೆ ನಮ್ಮ ಸ್ವಾತಂತ್ರ್ಯ ಹೋರಾಟದ ನೈಜ ಪರಿಸ್ಥಿತಿ ವಿವರಿಸಿದ್ದೆ. ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದು, ವಿವಾದ ಸೃಷ್ಟಿಸುವ ಅಗತ್ಯವಿಲ್ಲ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ನಾನು ಮಹಾತ್ಮ ಗಾಂಧಿ ಕುರಿತು ಹೇಳಿಕೆ ನೀಡಿಲ್ಲ. ಆದರೆ ನಮ್ಮ ಸ್ವಾತಂತ್ರ್ಯ ಹೋರಾಟದ ನೈಜ ಪರಿಸ್ಥಿತಿ ವಿವರಿಸಿದ್ದೆ. ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದು, ವಿವಾದ ಸೃಷ್ಟಿಸುವ ಅಗತ್ಯವಿಲ್ಲ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.

ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಅನಂತ್ ಕುಮಾರ್ ಹೆಗ್ಡೆ ಅವರು, 'ಹೈಕಮಾಂಡ್ ನೀಡಿರುವ ನೋಟಿಸಿಗೆ ಉತ್ತರ ನೀಡಿದ್ದೇನೆ.ಮುಂದಿನದನ್ನು ಹೈಕಮಾಂಡ್ ನಿರ್ಧರಿಸಲಿ. ನಾನು ನನ್ನ ಹೇಳಿಕೆಗೆ ಬದ್ದವಾಗಿರುತ್ತೇನೆ ಎಂದು ಹೇಳಿದ್ದಾರೆ.

'ನಾನು ಯಾವುದೇ ಪಕ್ಷ ಅಥವಾ ವ್ಯಕ್ತಿಯನ್ನು ಉದ್ದೇಶಿಸಿ ಮಾತನಾಡಿರಲಿಲ್ಲ. ನಮ್ಮ ಸ್ವಾತಂತ್ರ್ಯ ಹೋರಾಟ ಹೇಗಿತ್ತು ಎಂಬುದನ್ನು ಹೇಳಿದ್ದೆ. ನನ್ನ ಭಾಷಣ ಈಗಲೂ ಯೂಟ್ಯೂಬ್ ನಲ್ಲಿ ಲಭ್ಯವಿದೆ. ಯಾರು ಬೇಕಾದರೂ ಕೇಳಬಹುದು. ನಾನು ಗಾಂಧಿ ಮತ್ತು ನೆಹರು ಕುರಿತು ಒಂದೇ ಒಂದು ಪದವನ್ನೂ ಬಳಕೆ ಮಾಡಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬಂದ ವರದಿಗಳು ತಪ್ಪು, ಇದರಲ್ಲಿ ವಿವಾದದ ಪ್ರಶ್ನೆಯೇ ಇಲ್ಲ. ಹೀಗಿರುವಾಗ ಕ್ಷಮೆ ಏಕೆ ಕೇಳಬೇಕು. ನನ್ನ ಪಕ್ಷ ನನಗೆ ನೋಟಿಸ್ ನೀಡಿದೆ. ನಾನೂ ಕೂಡ ಅದಕ್ಕೆ ಉತ್ತರ ನೀಡಿದ್ದೇನೆ. ಮುಂದಿನ ನಿರ್ಧಾರ ಹೈಕಮಾಂಡ್ ಮಾಡಲಿ ಎಂದು ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com