ಬಿಜೆಪಿಯಿಂದ ದ್ವೇಷದ ರಾಜಕಾರಣ ಆರೋಪ: ಸಿಎಂ ಮನೆ ಮುಂದೆ ಧರಣಿಗೆ ಜೆಡಿಎಸ್ ಚಿಂತನೆ

ಜಿಲ್ಲೆಗೆ ಮಂಜೂರಾಗಿದ್ದ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ನಿಲ್ಲಿಸಿರುವ ರಾಜ್ಯ ಬಿಜೆಪಿ ಸರ್ಕಾರ, ದ್ವೇಷ ರಾಜಕಾರಣ ಮಾಡುತ್ತಿದೆ. ಈ ಧೋರಣೆ ಖಂಡಿಸಿ  ಶೀಘ್ರದಲ್ಲಿಯೇ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ಧರಣಿ ನಡೆಸಲಾಗುವುದು ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ರೇವಣ್ಣ ಎಚ್ಚರಿಸಿದ್ದಾರೆ. 
ಹೆಚ್.ಡಿ.ರೇವಣ್ಣ
ಹೆಚ್.ಡಿ.ರೇವಣ್ಣ

ಹಾಸನ: ಜಿಲ್ಲೆಗೆ ಮಂಜೂರಾಗಿದ್ದ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ನಿಲ್ಲಿಸಿರುವ ರಾಜ್ಯ ಬಿಜೆಪಿ ಸರ್ಕಾರ, ದ್ವೇಷ ರಾಜಕಾರಣ ಮಾಡುತ್ತಿದೆ. ಈ ಧೋರಣೆ ಖಂಡಿಸಿ  ಶೀಘ್ರದಲ್ಲಿಯೇ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ಧರಣಿ ನಡೆಸಲಾಗುವುದು ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ರೇವಣ್ಣ ಎಚ್ಚರಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರು ಮಾಡಿತ್ತು. ಅನೇಕ ಕಾಮಗಾರಿಗಳು ಪ್ರಗತಿಯಲ್ಲಿವೆ. ಇನ್ನು ಕೆಲವು ಮುಗಿಯುವ ಹಂತದಲ್ಲಿವೆ. ಆದರೆ, ಈ ಸಂದರ್ಭದಲ್ಲಿ ಅವುಗಳನ್ನು ನಿಲ್ಲಿಸುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. 

ಹಾಸನ, ಹೂವಿನಹಡಗಲಿ, ಹೊಸಪೇಟೆ, ಹೊಳೆನರಸೀಪುರ, ಚಾಮರಾಜನಗರ ಸೇರಿದಂತೆ 33ಕ್ಕೂ ಹೆಚ್ಚು ಸರ್ಕಾರಿ ಪಾಲಿಟೆಕ್ನಿಕ್ ಗಳಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದು, ಅವರಿಗೆ ಜಿಂದಾಲ್ ಮತ್ತು ವಿಪ್ರೋ ಕಂಪನಿಗಳು ವಿದ್ಯಾರ್ಥಿ ವೇತನ ನೀಡುತ್ತಿದ್ದರೂ ಸರ್ಕಾರ ಮಾತ್ರ ತನ್ನ ಪಾಲಿನ ಅನುದಾನ ಬಿಡುಗಡೆ ಮಾಡಲು ನಿಕಾರಣೆ ಮಾಡುತ್ತಿದೆ. ಸರ್ಕಾರಿ ಕಾಲೇಜುಗಳ ನಿರ್ವಹಣೆ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು. ಅದನ್ನು ನಿಭಾಯಿಸಲಾಗದೆ ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ಆರೋಪಿಸಿದರು. 

ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಥಾಪಿಸಲಾಗಿದ್ದ ಹೊಳೆ ನರಸೀಪುರ ಪಾಲಿಟೆಕ್ನಿಕ್, ದೇವೇಗೌಡರು ಓದಿದ ಪಾಲಿಟೆಕ್ನಿಕ್ ಸೇರಿದಂತೆ ಜಿಲ್ಲೆಯ ಅನೇಕ ಪಾಲಿಟೆಕ್ನಿಕ್ ಕಾಲೇಜುಗಳನ್ನು ಮುಚ್ಚಲು ಹೊರಟಿರುವ ಸರ್ಕಾರವು ಖಾಸಗಿಯವರೊಡನೆ ಶಾಮೀಲಾಗಿದೆ ಎಂದು ದೂರಿದರು. 

ಕೇವಲ ಮಂತ್ರಿ ಮಂಡಲ ರಚನೆ ಕಡೆ ಗಮನ ಹರಿಸಿರುವ ಸರ್ಕಾರ, ಶಿಕ್ಷಣ ಸಂಸ್ಥೆಗಳಿಗೆ ಮೂಲಕ ಸೌಕರ್ಯ ಕಲ್ಪಿಸದೆ, ವಿದ್ಯಾರ್ಥಿಗಳಿಗೆ ತೊಂದರೆ ನೀಡುತ್ತಿದೆ. ಹೊಳೆನರಸೀಪುರ ಪಾಲಿಟೆಕ್ನಿಕ್ 12 ವರ್ಷಗಳಿಂದ ನಡೆಯುತ್ತಿದ್ದು, ಸುಮಾರು 176 ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಇಂತಹ ಕಾಲೇಜುಗಳನ್ನು ಮುಚ್ಚಲು ಹೊರಟಿಸಿರುವ ಸರ್ಕಾರದ ಧೋರಣೆ ಖಂಡನೀಯ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com