ರಾಜ್ಯದಲ್ಲಿ ಕೊರೋನಾ ವೈರಸ್ ಇಲ್ಲ, ಆದರೂ ಮುಂದುವರೆದ ಕಟ್ಟೆಚ್ಚರ

ರಾಜ್ಯದಲ್ಲಿ ಈವರೆಗೆ ಯಾರಿಗೂ ಕೊರೋನಾ ವೈರಸ್ ಸೋಂಕು ಇಲ್ಲದಿರುವುದು ದೃಢಪಟ್ಟಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 
ರಾಜ್ಯದಲ್ಲಿ ಕೊರೋನಾ ವೈರಸ್ ಇಲ್ಲ, ಆದರೂ ಮುಂದುವರೆದ ಕಟ್ಟೆಚ್ಚರ
ರಾಜ್ಯದಲ್ಲಿ ಕೊರೋನಾ ವೈರಸ್ ಇಲ್ಲ, ಆದರೂ ಮುಂದುವರೆದ ಕಟ್ಟೆಚ್ಚರ

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಯಾರಿಗೂ ಕೊರೋನಾ ವೈರಸ್ ಸೋಂಕು ಇಲ್ಲದಿರುವುದು ದೃಢಪಟ್ಟಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 

ಕೊರೋನಾ ವೈರಸ್ ಸೋಂಕು ಲಕ್ಷಣಗಳು ಕಾಣಿಸಿಕೊಂಡ 52 ಮಂದಿಯ ಸ್ಯಾಂಪಲ್ ಅನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಆ ವರದಿ ಬಂದಿದ್ದು, ಯಾರಲ್ಲೂ ಸೋಂಕು ದೃಢಪಟ್ಟಿಲ್ಲ. ತುಮಕೂರಿನಲ್ಲಿ ಚೀನಾ ಮೂಲಕ ವಿದ್ಯಾರ್ಥಿಗೆ ರೋಗದ ಲಕ್ಷಣಗಳು ಕಾಣಿಸಿಕೊಂಡಿರುವುದು ಈ ಹಿಂದೆ ವರದಿಯಾಗಿತ್ತು. 

ವ್ಯಕ್ತಿಯನ್ನು ತಪಾಸಣೆಗೊಳಪಡಿಸಲಾಗಿದ್ದು, ಮಾದರಿಗಳನ್ನು ಪರೀಕ್ಷಿಸಲಾಗಿದೆ. ಪರೀಕ್ಷೆ ಬಳಿಕ ಸೋಂಕಿಲ್ಲದಿರುವುದು ದೃಢಪಟ್ಟಿದೆ. ಆದರೂ ಸುರಕ್ಷತಾ ದೃಷ್ಟಿಯಿಂದ 28 ದಿನಗಳ ಕಾಲ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಬುಧವಾರ 6 ಮಂದಿ ಹೊಸ ಪ್ರಯಾಣಿಕರು ನಿಗಾದಲ್ಲಿರಲು ನೋಂದಣಿಯಾಗಿದ್ದಾರೆ. ರಾಜ್ಯದಲ್ಲಿ ಈ ವರೆಗೂ ಸೋಂಕು ದೃಢಪಟ್ಟಿಲ್ಲ. ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಬಂದರುಗಳಲ್ಲಿ ಕಟ್ಟೆಚ್ಚರ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com