ಹಾವೇರಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ:ಕಸಾಪ ಅಧ್ಯಕ್ಷ ಮನು ಬಳಿಗಾರ್ ಘೋಷಣೆ

ಮುಂಬರುವ 86ನೇ ಅಖಿಲ‌ ಭಾರತ ಸಾಹಿತ್ಯ ಸಮ್ಮೇಳನದ ಪಟ್ಟ ಹಾವೇರಿ ಪಾಲಾಗಿದೆ.ಸಮ್ಮೇಳನದ ಹೊಣೆಗಾರಿಕೆ ಹೊತ್ತುಕೊಳ್ಳಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಾವೇರಿ,  ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯ ಮಧ್ಯೆ ತೀವ್ರ  ಪೈಪೋಟಿ ಏರ್ಪಟ್ಟಿತ್ತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಲಬುರಗಿ: ಮುಂಬರುವ 86ನೇ ಅಖಿಲ‌ ಭಾರತ ಸಾಹಿತ್ಯ ಸಮ್ಮೇಳನದ ಪಟ್ಟ ಹಾವೇರಿ ಪಾಲಾಗಿದೆ.ಸಮ್ಮೇಳನದ ಹೊಣೆಗಾರಿಕೆ ಹೊತ್ತುಕೊಳ್ಳಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಾವೇರಿ,  ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯ ಮಧ್ಯೆ ತೀವ್ರ  ಪೈಪೋಟಿ ಏರ್ಪಟ್ಟಿತ್ತು.

ಕಲಬುರಗಿ ನಗರಾಭಿವೃದ್ಧಿ ಕಚೇರಿಯಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಮೂಲ ಹಾವೇರಿ ಜಿಲ್ಲೆಗೆ ಸಮ್ಮೇಳನದ ‌ಪಟ್ಟ ಒಲಿದು ಬಂದಿದೆ. ಮುಂಬರುವ 86ನೇ  ಅಕ್ಷರ ಜಾತ್ರೆಗೆ ಹಾವೇರಿ ಜಿಲ್ಲೆ ಸಾಕ್ಷಿಯಾಗಲಿದೆ. 

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲು ನಡೆಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷ ನಡೆಸುವುದರ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಮನು ಬಳಿಗಾರ್ ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com