ಕೊರೋನಾ ವೈರಸ್ ಭೀತಿ: ಮಾರ್ಗಸೂಚಿ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಈವರೆಗೂ ಕೊರೋನಾ ವೈರಸ್ ಸೋಂಕಿತ ಪ್ರಕರಣಗಳು ದೃಢವಾಗದಿದ್ದರೂ ದಿನದಿಂದ ದಿನಕ್ಕೆ ವೈರಸ್ ಬಗೆಗಿನ ಭೀತಿ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಅಧಿಕಾರಿಗಳು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಈವರೆಗೂ ಕೊರೋನಾ ವೈರಸ್ ಸೋಂಕಿತ ಪ್ರಕರಣಗಳು ದೃಢವಾಗದಿದ್ದರೂ ದಿನದಿಂದ ದಿನಕ್ಕೆ ವೈರಸ್ ಬಗೆಗಿನ ಭೀತಿ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಅಧಿಕಾರಿಗಳು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ. 

ವಿಶ್ವ ಆರೋಗ್ಯ ಸಂಸ್ಥೆಯ ಸೂಚನೆ ಮೇರೆಗೆ ವೈರಸ್ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. 

ಈ ಮಾರ್ಗ ಸೂಚಿಯಲ್ಲಿ ಸೋಂಕಿಗೆ ಒಳಗಾಗಿದ್ದಾರೆಂದು ಶಂಕಿಸಲಾದ ವ್ಯಕ್ತಿಗಳ ಹಾಗೂ ಸೋಂಕಿಗೆ ಒಳಗಾದವರನ್ನು ಹೇಗೆ ತಪಾಸಣೆ ಮಾಡಬೇಕು. ಚಿಕಿತ್ಸೆ ನೀಡಬೇಕು ಹಾಗೂ ಎಷ್ಟು ದಿನಗಳ ವರೆಗೆ ನಿಗಾ ಇರಿಸಬೇಕೆಂಬ ಮಾಹಿತಿ ಇದೆ. ಈ ಮಾರ್ಗಸೂಚಿಯನ್ನು ಆರೋಗ್ಯ ಇಲಾಖೆಯ ಅಧಿಕಾರಿಗಲು, ವೈದ್ಯಕೀಯ ಶಿಕ್ಷಣ ಇಲಾಖೆ ವೈದ್ಯರ ಸಂಘಟನೆಗಳಿಗೆ ಕಳುಹಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com