ಎಸ್ಎಸ್ಎಲ್'ಸಿ, ಪಿಯುಸಿ ಪರೀಕ್ಷೆಗಳ ಕುರಿತು ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ: ಶಿಕ್ಷಣ ಸಚಿವ

ಎಸ್ಎಸ್ಎಲ್'ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗವಿ ಎಂದು ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಚ್ಚರಿಸಿದ್ದಾರೆ. 
ಶಿಕ್ಷಣ ಸಚಿವ
ಶಿಕ್ಷಣ ಸಚಿವ

ಬೆಂಗಳೂರು: ಎಸ್ಎಸ್ಎಲ್'ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗವಿ ಎಂದು ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಚ್ಚರಿಸಿದ್ದಾರೆ. 

ಪರೀಕ್ಷಾ ಸಿದ್ಧತೆ ಕುರಿತು ಶಿಕ್ಷಣ, ಪೊಲೀಸ್ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿ ಮಾತನಾಡಿದ ಅವರು, ಈ ಹಿಂದೆ ಎಸ್ಎಸ್ಎಲ್'ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳ ಸೋರಿಕೆ ಭಾರೀ ಗೊಂದಲಗಳನ್ನು ಸೃಷ್ಡಿ ಮಾಡಿತ್ತು. ಹಲವು ವರ್ಷಗಳ ಹಿಂದಿನ ಪ್ರಶ್ನೆಪತ್ರಿಕೆಗಳನ್ನು ತೋರಿಸಿ, ಪ್ರಸಕ್ತ ಸಾಲಿನ ಪ್ರಶ್ನೆ ಪತ್ರಿಕೆ ಎಂದು ವದಂತಿಗಳನ್ನು ಸೃಷ್ಟಿ ಮಾಡಲಾಗಿತ್ತು. ಇದೀಗ ಎಲ್ಲಾ ಜಿಲ್ಲೆಗಳ ಉಪ ಆಯುಕ್ತರ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಬಾರಿಯ  ಎಸ್ಎಸ್ಎಲ್'ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಯಾವುದೇ ತೊಡಕುಗಳು ಬಾರದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಹೇಳಿದ್ದಾರೆ. 

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 6,80,498 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು. 5,61,530 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯುತ್ತಿದ್ದಾರೆ. ಉಳಿದವರು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆಂದು ತಿಳಿಸಿದ್ದಾರೆ. 

ಇನ್ನು ಶಾಲಾ-ಕಾಲೇಜುಗಳ ಬಳಿಯಿರುವ ಫೋಟೋಕಾಫಿ, ಸೈಬರ್ ಕೆಫೆಗಳ ಮೇಲೆ ಪೊಲೀಸರು ಕಣ್ಗಾವಲಿರಿಸಲಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ನೋಡಿಕೊಳ್ಳಲಿದ್ದಾರೆ. ಈಗಾಗಲೇ 1,016 ಪರೀಕ್ಷಾ ಕೇಂದ್ರಗಳಲ್ಲಿ ಭದ್ರತೆಗಳನ್ನು ಹೆಚ್ಚಿಸಲಾಗಿದೆ. ಪರೀಕ್ಷೆ ವೇಳೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com