ಕೊರೋನಾವೈರಸ್ ಭೀತಿ: ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಸ್ಥಗಿತ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡುವುದನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡುವುದನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.

ಕೊರೊನಾ ವೈರಸ್ ಭೀತಿ‌ ಹಿನ್ನೆಲೆಯಲ್ಲಿ ತಪಾಸಣೆ ಗೆ ಬ್ರೇಕ್ ಹಾಕಲಾಗಿದೆ. ಕೊರೊನಾ ಇದೊಂದು ಸೋಂಕು ವೈರಸ್ ಆಗಿದ್ದು, ತಪಾಸಣೆ ಮಾಡುವ ಸಂದರ್ಭದಲ್ಲಿ ಸೋಂಕು ಹರಡುವ ಸಂಭವವಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಸಂಚಾರಿ ಪೊಲೀಸರು ಈ ನಿರ್ಧಾರ ಕೈಗೊಂಡಿದ್ದಾರೆ.

ಕೊರೋನಾ ವೈರಸ್ ವೊದು ಜಾತಿಯ ವೈರಸ್ ಆಗಿದೆ. ಸೂಕ್ಷ್ಮ ದರ್ಶಕದಲ್ಲಿ ಇದು ಕಿರೀಟ ರೀತಿ ಕಾಣಿಸುತ್ತದೆ. ಲ್ಯಾಟಿನ್ ಭಾಷೆಯಲ್ಲಿ ಕೊರೋನಾ ಎಂದರೆ ಕಿರೀಟ ಎಂದರ್ಥ. ಹೀಗಾಗಿ ವೈರಸ್'ಗೆ ಕೊರೋನಾ ಹೆಸರು. ಚೀನಾದ ವುಹಾನ್ ನಗರದಲ್ಲಿನ ಅಕ್ರಮ ವನ್ಯ ಜೀವಿ ಮಾಂಸ ಕೇಂದ್ರದ ಮೂಲಕ ಮಾನವರಿಗೆ ವೈರಸ್ ತಗುಲಿದೆ. ಸೋಂಕು ತಗುಲಿದವರು ತೀವ್ರ ಶೀತ, ಕೆಮ್ಮು, ಗಂಟಲು ಕಟ್ಟುವಿಕೆ, ಉಸಿರಾಟದ ತೊಂದರೆ, ತಲೆನೋವು, ಜ್ವರದ ಸಮಸ್ಯೆಗೆ ತುತ್ತಾಗುತ್ತಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com