ಸಿಎಎ ವಿರುದ್ಧ ಪ್ರತಿ ತಿಂಗಳು 2024 ರವರೆಗೆ ಪ್ರತಿಭಟನೆ-ಶತಾಯುಷಿ ದೊರೆಸ್ವಾಮಿ

ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಶತಾಯುಷಿ ದೊರೆಸ್ವಾಮಿ ಹೇಳಿದ್ದಾರೆ.
ಎಚ್ ಎಸ್ ದೊರೆಸ್ವಾಮಿ
ಎಚ್ ಎಸ್ ದೊರೆಸ್ವಾಮಿ

ಬೆಂಗಳೂರು: ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಶತಾಯುಷಿ ದೊರೆಸ್ವಾಮಿ ಹೇಳಿದ್ದಾರೆ.

ಸ್ವಾತಂತ್ರ್ಯ ಉದ್ಯಾನವದಲ್ಲಿ ಪ್ರತಿಭಟನೆ ನಡೆಸುತ್ತಿರುವ ದೊರೆಸ್ವಾಮಿ, ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿ, ಎನ್ ಆರ್ ಸಿ, ಎನ್ ಪಿಆರ್ ಮೂಲಕ ರಾಷ್ಟ್ರದ ವಾಸ್ತವ ಪರಿಸ್ಥಿತಿಯನ್ನು ಮರೆಮಾಚಿಸಲಾಗುತ್ತಿದೆ. ಇತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು, ಇಲ್ಲದಿಂದ ರಾಜೀನಾಮೆ ನೀಡಿ ಹೊರ ಹೋಗಬೇಕು. ಮುಂದಿನ ಸಾರ್ವತ್ರಿಕ ಚುನಾವಣೆ ಬರುವವರೆಗೂ ಅಂದರೆ  2024ರವರೆಗೂ ಪ್ರತಿ ತಿಂಗಳ ಕೆಲ ದಿನಗಳವರೆಗೂ ನಿರಂತರವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಟೌನ್ ಹಾಲ್ ನಲ್ಲಿ ಪ್ರತಿಭಟಿಸಲು ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ನಾಗರಿಕ ಹಕ್ಕುಗಳ ಕ್ರಿಯಾ ಸಮಿತಿ ಅಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪ್ರತಿಭಟನಾಕಾರರು, ಜಾತ್ಯತೀಯ ರಾಷ್ಟ್ರದಿಂದ ಮುಸ್ಲಿಂರನ್ನು ಹೊರಗೆ ತಳ್ಳಲು ಸಿಎಎ ಜಾರಿಗೆ ತರಲಾಗಿದೆ ಎಂದು ಆರೋಪಿಸಿದರು. 

ಕೆಟ್ಟ ನೀತಿಯಿಂದಾಗಿ ದೇಶದ ಆರ್ಥಿಕ ವ್ಯವಸ್ಥೆ ಕುಸಿಯುತ್ತಿದೆ. ಅಧಿಕಾರ ದುರ್ಬಳಕೆಯಿಂದಾಗಿ ದೇಶದಲ್ಲಿ ನಿರುದ್ಯೋಗ, ಭ್ರಷ್ಟಾಚಾರ ಮತ್ತಿತರ ಸಮಸ್ಯೆಗಳು ತಾಂಡವವಾಡುತ್ತಿವೆ ಎಂದು ಪ್ರತಿಭಟನಾಕಾರರು ಟೀಕಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com