ಫೆ.13ರಂದು ಕರ್ನಾಟಕ ಬಂದ್ ಗೆ ಬೆಂಬಲ ನೀಡದ ಚಿತ್ರರಂಗದ ಧೋರಣೆ ಖಂಡನೀಯ!

ಡಾ.ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಲು ಅಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಕನ್ನಡ ಚಿತ್ರೋದ್ಯಮ ಬೆಂಬಲ ನೀಡದೇ ಇರುವುದನ್ನು ಕನ್ನಡಪರ ಒಕ್ಕೂಟಗಳು ಖಂಡಿಸಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಡಾ.ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಲು ಅಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಕನ್ನಡ ಚಿತ್ರೋದ್ಯಮ ಬೆಂಬಲ ನೀಡದೇ ಇರುವುದನ್ನು ಕನ್ನಡಪರ ಒಕ್ಕೂಟಗಳು ಖಂಡಿಸಿವೆ.

ರಾಜ್ಯದಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ಕೊಡಬೇಕೆಂದು ಹೇಳುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಫೆಬ್ರವರಿ 13ರಂದು ಕರ್ನಾಟಕ ಬಂದ್​ಗೆ ಕರೆ ಕೊಟ್ಟಿವೆ.  ಈ ಕುರಿತಂತೆ ಕನ್ನಡಿಗರ ಉದ್ಯೋಗ ವೇದಿಕೆ ಅಧ್ಯಕ್ಷ ವಿನೂತ ಮಾತನಾಡಿ, ಕನ್ನಡ ಚಿತ್ರರಂಗ ಇಂದಿಗೂ ಉಳಿದಿರುವುದು ಕನ್ನಡಿಗರಿಂದ. ಆದರೆ, ಕನ್ನಡ ಕಲಾವಿದರು ಬಂದ್ ಗೆ ಸಹಕರಿಸದಿರುವುದು ನಾಚಿಕೆಗೇಡಿನ ಸಂಗತಿ. ಕನ್ನಡ ನಾಡಿನ ಅನ್ನ ತಿಂದು ಕಲಾವಿದರು ರಾಜ್ಯದ ಜನತೆಗೆ ದ್ರೋಹವೆಸಗುವ ಕೆಲಸ ಮಾಡುತ್ತಿರುವುದು ಖಂಡನಾರ್ಹ ಎಂದರು.

ರಾಜ್ಯದಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ಕೊಡಬೇಕೆಂದು ಹೇಳುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಫೆಬ್ರವರಿ 13ರಂದು ಕರ್ನಾಟಕ ಬಂದ್​ಗೆ ಕರೆ ಕೊಟ್ಟಿವೆ. ರಾಜ್ಯದ ಪ್ರತಿಯೊಬ್ಬರು ಕೂಡ ಸ್ವಯಂಪ್ರೇರಿತವಾಗಿ ಬಂದ್​ಗೆ ಸಹಕಾರ ನೀಡುವಂತೆ ಸಂಘಟನೆಗಳು ಮನವಿ ಮಾಡಿಕೊಂಡಿವೆ. ಇದೀಗ ಬಂದ್ ಗೆ ರಾಜ್ಯ ಸರ್ಕಾರ ಹಾಗೂ ಸ್ವಾಮ್ಯ ಸಂಘ ಸಂಸ್ಥೆಗಳ ವಾಹನ ಚಾಲಕರ ಒಕ್ಕೂಟ ಬೆಂಬಲ ಘೋಷಿಸಿದೆ.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎಂ.ಎನ್.ವೇಣುಗೋಪಾಲ್, 'ಕರ್ನಾಟಕದ ಮಾತೃ ಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿರುವ ಮಕ್ಕಳು ಇಂದು ಸರಿಯಾದ ರೀತಿಯಲ್ಲಿ ಉದ್ಯೋಗ ಸಿಗದೆ ನಿರುದ್ಯೋಗಿಗಳಾಗಿದ್ದಾರೆ. ಅಂದಿನಿಂದ ಇಂದಿನವರೆಗಿನ ಎಲ್ಲಾ ಸರ್ಕಾರಗಳು ಕೇವಲ ಭರವಸೆ ನೀಡುತ್ತಿವೆಯೇ ಉದ್ಯೋಗ ಭರವಸೆ ಈಡೇರಿಸಿಲ್ಲ. ಒಂದು ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಇನ್ನೆರಡು ದಿನಗಳಲ್ಲಿ ಸರೋಜಿನಿ ಮಹಿಷಿ ವರದಿ ಜಾರಿಗೊಳಿಸದಿದ್ದರೆ ನ್ಯಾಯಾಲಯದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಿದರು.

ಅಂತೆಯೇ ಕರ್ನಾಟಕ ಬಂದ್ ಗೆ ಅನೇಕ ಕನ್ನಡ ಪರ ಸಂಘಟನೆಗಳು, 40ಕ್ಕೂ ಹೆಚ್ಚು ಮಠಾಧೀಶರು, ಅನೇಕ ರಾಜಕಾರಣಿಗಳು, ಬೆಂಬಲ ನೀಡಿದ್ದಾರೆ. ನಗರದಲ್ಲಿ ಟೌನ್ ಹಾಲ್ ನಿಂದ ಫ್ರೀಡಂಪಾರ್ಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com