ಮಧ್ಯಮ, ದೀರ್ಘಾವಧಿ ಸಾಲದ ಮೇಲಿನ ಬಡ್ಡಿ ಮನ್ನಾಗೆ ರಾಜ್ಯ ಸರ್ಕಾರ ನಿರ್ಧಾರ: ಯಡಿಯೂರಪ್ಪ

ರಾಜ್ಯದ ಸಹಕಾರಿ ಸಂಘಗಳು ಮತ್ತು ಪ್ರಾಥಮಿಕ ಕೃಷಿ ಭೂ ಅಭಿವೃದ್ಧಿ ಬ್ಯಾಂಕುಗಳಿಂದ ಪಡೆದ ಮಧ್ಯಂತರ ಮತ್ತು ದೀರ್ಘಾವಧಿಯ ಸಾಲಗಳ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ

ಹಳೇಬೀಡು: ರಾಜ್ಯದ ಸಹಕಾರಿ ಸಂಘಗಳು ಮತ್ತು ಪ್ರಾಥಮಿಕ ಕೃಷಿ ಭೂ ಅಭಿವೃದ್ಧಿ ಬ್ಯಾಂಕುಗಳಿಂದ ಪಡೆದ ಮಧ್ಯಂತರ ಮತ್ತು ದೀರ್ಘಾವಧಿಯ ಸಾಲಗಳ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಹಾಸನ ಜಿಲ್ಲೆ ಹಳೇಬೀಡಿನ ತರಳಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಭಾಗವಹಿಸುವ  ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟ್ರ್ಯಾಕ್ಟರ್, ಪವರ್ ಟಿಲ್ಲರ್ ಮತ್ತು ಕೃಷಿ ಉಪಕರಣಗಳ ಖರೀದಿ ಸೇರಿದಂತೆ ಕೃಷಿ ಉದ್ದೇಶಗಳಿಗಾಗಿ ಮಧ್ಯಮ ಮತ್ತು ದೀರ್ಘಾವಧಿಯ ಸಾಲವನ್ನು ಪಡೆದ ರೈತರು ಭವಿಷ್ಯದಲ್ಲಿ ಬಡ್ಡಿಯನ್ನು ಪಾವತಿಸಬೇಕಾಗಿಲ್ಲ.ತೊಂದರೆಯಲ್ಲಿರುವ ರೈತರ ಕಲ್ಯಾಣಕ್ಕೆ ತಮ್ಮ ಸರ್ಕಾರ ಬದ್ಧವಾಗಿರುವುದರಿಂದ ಕೃಷಿ ಸಮುದಾಯದ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಅವರು ಹೇಳಿದರು.

ಮಧ್ಯಮ ಮತ್ತು ದೀರ್ಘಕಾಲೀನ ಸಾಲಗಳ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವ ನಿರ್ಧಾರವು ರಾಜ್ಯದಲ್ಲಿ ಇದು ಮೊದಲ ಬಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

ರೈತ ಪರ ಬಜೆಟ್‌ನ ಸುಳಿವು ನೀಡಿದ ಯಡಿಯೂರಪ್ಪ ಮುಂಬರುವ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಆದ್ಯತೆ ನೀಡಲಾಗುವುದು ತಮ್ಮ ಸರ್ಕಾರವು ಭತ್ತಕ್ಕೆ ಬೆಂಬಲ ಬೆಲೆಯನ್ನು ಘೋಷಿಸಿದೆ ಮತ್ತು ರಾಜ್ಯಾದ್ಯಂತ ಹತ್ತಿರದ ಜಲಾಶಯಗಳಿಂದ ಟ್ಯಾಂಕ್‌ಗಳನ್ನು ತುಂಬಲು ಬದ್ಧವಾಗಿದೆ ಎಂದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com