ದೆಹಲಿಯಲ್ಲಿ ಆಪ್ ಭರ್ಜರಿ ಗೆಲುವು: ಸಿಹಿ ಹಂಚಿ ಸಂಭ್ರಮ ಆಚರಿಸಿದ ಜೆಡಿಎಸ್

ಬಲಿಷ್ಠ ನಾಯಕರಾದ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಸ್ಪರ್ಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಷ್ಟ್ರೀಯ ನಾಯಕರು ಸಿಹಿ ಹಂಚಿ ಸಂಭ್ರಮವನ್ನಾಚರಿಸಿದ್ದಾರೆ. 
ದೆಹಲಿಯಲ್ಲಿ ಆಪ್ ಗೆಲವು
ದೆಹಲಿಯಲ್ಲಿ ಆಪ್ ಗೆಲವು

ಬೆಂಗಳೂರು: ಬಲಿಷ್ಠ ನಾಯಕರಾದ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಸ್ಪರ್ಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಷ್ಟ್ರೀಯ ನಾಯಕರು ಸಿಹಿ ಹಂಚಿ ಸಂಭ್ರಮವನ್ನಾಚರಿಸಿದ್ದಾರೆ. 

ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ, ಕೇರಳ ಜಲಸಂಪನ್ಮೂಲ ಸಚಿವ ಕೃಷ್ಣ ಕುಟ್ಟಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಹಾಗೂ ಹೆಚ್.ಕೆ.ಕುಮಾರಸ್ವಾಮಿಯವರು ಸ್ಥಳೀಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷದ ಗೆಲುವಿಗೆ ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. 

ಮತ್ತೊಂದೆಡೆ ಜೆಡಿಎಸ್ ಪಕ್ಷ ಸಭೆಯೊಂದನ್ನು ನಡೆಸಿದ್ದರು. ಮಾಜಿ ಸಚಿವರಾಗ ಗುಬ್ಬಿ ಶ್ರೀನಿವಾಸ್ ಹಾಗೂ ಜಿಟಿ ದೇವೇಗೌಡ ನಡುವಿನ ಮನಸ್ತಾಪ ಕುರಿತಂತೆ ಚರ್ಚೆ ನಡೆಸಿದ್ದಾರೆ.

ಈ ನಡುವ ಪರಿಷತ್ ಚುನಾವಣೆಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಕುಮಾರ್ ಅವರು ನಿಂತಿದ್ದು, ಗೆಲುವು ಸಾಧಿಸುವ ವಿಶ್ವಾಸವನ್ನು ಜೆಡಿಎಸ್ ವ್ಯಕ್ತಪಡಿಸಿದೆ. ಚುನಾವಣೆ ವೇಳೆ ವಿರೋಧ ಪಕ್ಷಗಳು ಒಗ್ಗೂಡಿದರೆ ಮತಗಳು ವಿಂಗಡನಯಾಗುತ್ತದೆ. ಆದರೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಹೇಳಿದ್ದಾರೆ. 

ರಾಜ್ಯ ಕಾರ್ಯಕಾರಿಣಿಯನ್ನು ರಚನೆ ಮಾಡಿಲ್ಲ ಆದರೂ, ಪಕ್ಷವು ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಆಯೋಜಿಸುತ್ತಿದೆ ಎಂದು ಇದೇ ವೇಳೆ ಕೆಲ ಅತೃಪ್ತ ನಾಯಕರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com