ತಳವಾರ, ಪರಿವಾರ, ಸಿದ್ಧಿ ಜನಾಂಗ ಎಸ್ಟಿಗೆ : ಸಂಸತ್ತಿನಲ್ಲಿ ಅಂಗೀಕಾರಕ್ಕೆ ಕೇಂದ್ರ ಸಚಿವರ ಸಂತಸ

ರಾಜ್ಯದ ಬುಡಕಟ್ಟು ಸಮುದಾಯದ ಪರಿವಾರ, ತಳವಾರ ಹಾಗೂ ಸಿದ್ದಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಧೇಯಕ ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವುದಕ್ಕೆ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ

ಬೆಂಗಳೂರು: ರಾಜ್ಯದ ಬುಡಕಟ್ಟು ಸಮುದಾಯದ ಪರಿವಾರ, ತಳವಾರ ಹಾಗೂ ಸಿದ್ದಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಧೇಯಕ ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವುದಕ್ಕೆ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ ಈ ಕುರಿತು ಟ್ವೀಟ್ ಮಾಡಿದ್ದು, ಇದು ಹಲವು ದಶಕಗಳ ಬೇಡಿಕೆಯಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಅದನ್ನು ಈಡೇರಿಸಿದೆ. ಇದಕ್ಕಾಗಿ ಪ್ರಧಾನಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಕೇಂದ್ರ ಸಚಿವ ಡಿ.ವಿ.ಸದಾನಂದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ, ಈ ಮಸೂದೆ ರಾಜ್ಯಸಭೆಯಲ್ಲಿ ಮೊದಲೇ ಅಂಗೀಕಾರಗೊಂಡಿತ್ತು. ಈಗ ಸಂಸತ್ತಿನ ಅಂಗೀಕಾರದೊಂದಿಗೆ ಈ ಸಮುದಾಯಗಳ ಮೂರುವರೆ ದಶಕಗಳ ಕನಸು ನನಸಾಗುವ ಕಾಲ ಕೂಡಿ ಬಂದಿದೆ ಎಂದು ಟ್ವಿಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com