ರಾಜ್ಯ ಅಂಗಡಿ ಮಳಿಗೆಗಳ ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡಿ; ಮೇಯರ್ ಗೌತಮ್ ಕುಮಾರ್

ರಾಜ್ಯದ ಎಲ್ಲಾ ಅಂಗಡಿ ಮಳಿಗೆಗಳ ನಾಮಫಲಕಗಳನ್ನು ಕನ್ನಡದಲ್ಲಿ ಬರೆಸಲು ಸಂಘ ಸಂಸ್ಥೆಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹೇಳಿದ್ದಾರೆ.

Published: 14th February 2020 02:27 PM  |   Last Updated: 14th February 2020 02:27 PM   |  A+A-


Goutham Kumar jain

ಗೌತಮ್ ಕುಮಾರ್ ಜೈನ್

Posted By : Shilpa D
Source : RC Network

ಬೆಂಗಳೂರು: ರಾಜ್ಯದ ಎಲ್ಲಾ ಅಂಗಡಿ ಮಳಿಗೆಗಳ ನಾಮಫಲಕಗಳನ್ನು ಕನ್ನಡದಲ್ಲಿ ಬರೆಸಲು ಸಂಘ ಸಂಸ್ಥೆಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹೇಳಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಜಯ ಕರ್ನಾಟಕ ವತಿಯಿಂದ ಆಯೋಜಿಸಿದ್ದ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿ  ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡುವ ಸಂಬಂಧ ಬಿಬಿಎಂಪಿ ಆದೇಶ ಮಾಡಿದೆ.

ಆದರೂ, ಕೆಲವರು ನಿಮಯ ಉಲ್ಲಂಘನೆ ಮಾಡುತ್ತಾರೆ. ಮಹದೇವಪುರ ವಲಯದಲ್ಲಿ ಹೆಚ್ಚಾಗಿ ಈ ಪ್ರಕರಣಗಳು ಬೆಳಕಿನ ಬಂದಿದ್ದು, ಸಂಘ ಸಂಸ್ಥೆಗಳು ಜಾಗೃತಿ ಆಂದೋಲನ ಕೈಗೊಳ್ಳಬೇಕೆಂದು ತಿಳಿಸಿದರು.

ಕೊಳಗೇರಿ ಪ್ರದೇಶದಲ್ಲಿನ ಜನರ ಆರೋಗ್ಯದ ಕಾಳಜಿ ವಹಿಸುವ ಬಗ್ಗೆ ನಾವು ಗಂಭೀರವಾಗಿ ಚಿಂತನೆ ನಡೆಸಬೇಕು ಎಂದ ಅವರು, ಉಳ್ಳವರು ಆರೋಗ್ಯಕ್ಕಾಗಿ ಹಣ ಖರ್ಚು ಮಾಡುತ್ತಾರೆ. ಆದರೆ ಇದರಿಂದ ಬಡವರಿಗೆ ತುಂಬಾ ತೊಂದರೆ ಆಗುತ್ತದೆ ಎಂದರು.

ಕೆಸಿ‌ ಜನರಲ್ ಆಸ್ಪತ್ರೆಯ ಮಹಿಳಾ ಆರೋಗ್ಯ ತಜ್ಞೆ ಡಾ.ಮಂಜುಳಾ ಮಾತನಾಡಿ, ಶಾರೀರಿಕ ಆರೋಗ್ಯವನ್ನು ಸಂರಕ್ಷಿಸುವುದು ನಮ್ಮ ಜವಾಬ್ದಾರಿ ಯಾಗಿದೆ. 

ಆದರೆ, ಅನಾರೋಗ್ಯ ಪೀಡಿತರಾಗುವವರೆಗೆ ಯಾರೂ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ ಎಂಬುದು ವಾಸ್ತವಿಕತೆಯಾಗಿದೆ ಎಂದ ಅವರು, ಜೀವನವನ್ನು ಸಂಪೂರ್ಣವಾಗಿ ಆಸ್ವಾದಿಸಲು, ಅನುಭವಿಸಲು ಆರೋಗ್ಯ ಅತೀ ಅಗತ್ಯ. ಸಂತೋಷದ ಮತ್ತು ಸುಖದ ಕೀಲಿಕೈ ಆರೋಗ್ಯವೇ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ರಾಜ್, ಜಯ ಕರ್ನಾಟಕ ರಾಜ್ಯಾಧ್ಯಕ್ಷ ಡಾ.ಬಿ.ಎನ್.ಜಗದೀಶ್,  ಆಯುರ್ವೇದ ತಜ್ಞ ಡಾ.ವಿ.ಗಿರೀಶ್ ಕುಮಾರ್, ಜಯ ಕರ್ನಾಟಕ ಬೆಂಗಳೂರು ಅಧ್ಯಕ್ಷ ಡಾ.ಎಂ.ಜಗದೀಶ್ ಗೌಡ  ಸೇರಿದಂತೆ ಪ್ರಮುಖರು ಇದ್ದರು.

Stay up to date on all the latest ರಾಜ್ಯ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp