ಪಾಕಿಸ್ತಾನ ಪರ ಘೋಷಣೆ ಕೂಗಿದ ಕೆಎಲ್ಇ ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತು
ಪಾಕಿಸ್ತಾನ ಪರ ಘೋಷಣೆ ಕೂಗಿದ ಕೆಎಲ್ಇ ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತು

ಪಾಕಿಸ್ತಾನ ಪರ ಘೋಷಣೆ ಕೂಗಿದ ಕೆಎಲ್ಇ ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತು

ನಗರದ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ ಕಾಶ್ಮಿರ ಮೂಲದ ಮೂವರು ವಿದ್ಯಾರ್ಥಿಗಳು 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ.

ಹುಬ್ಬಳ್ಳಿ: ನಗರದ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ ಕಾಶ್ಮಿರ ಮೂಲದ ಮೂವರು ವಿದ್ಯಾರ್ಥಿಗಳು 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ.

ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದಲ್ಲಿ ಓದುತ್ತಿರುವ ಅಮೀರ್, ಬಾಸೀತ್ ಮತ್ತು ತಾಲೀಬ್ ಎಂಬ ವಿದ್ಯಾರ್ಥಿಗಳು ಪುಲ್ವಾಮಾ ದಾಳಿ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳು ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಪ್ರಾಚಾರ್ಯ ಡಾ. ಬಸವರಾಜ ಆನಾಮಿ, 'ಸರ್ಕಾರಿ ಕೋಡಾದ ಅಡಿ ಮೂವರು ಕಾಶ್ಮಿರಿ ವಿದ್ಯಾರ್ಥಿಗಳು ಸೀಟು ಪಡೆದಿದ್ದರು. ವಿದ್ಯಾರ್ಥಿಗಳ ವೀಡಿಯೊ ಗಮನಿಸಿ ಪೊಲೀಸರಿಗೆ ನಾವೇ ಮಾಹಿತಿ ನೀಡಿದ್ದೇವೆ. ಅವರ ಮೇಲೆ ಕಾನೂನು ಕ್ರಮ ಕೈಗೊಂಡು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಗೋಕುಲ ಠಾಣೆ ಪೊಲೀಸರು ಆಗಮಿಸಿ, ವಿದ್ಯಾರ್ಥಿಗಳಿಂದ ಹಾಗೂ ಪ್ರಾಚಾರ್ಯರಿಂದ ಮಾಹಿತಿ ಪಡೆಯುತ್ತಿದ್ದಾರೆ. ಬಜರಂಗ ದಳದ ಕಾರ್ಯಕರ್ತರು ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com