ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವರಿಗೆ ಶಿಕ್ಷಣ ಸಚಿವ‌ರಿಂದ ಮನವಿ

ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿಯನ್ನು ತೋರಿಸಿದರೆ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುವಾಗುವಂತೆ ಸೂಕ್ತ ಸುತ್ತೋಲೆ ಹೊರಡಿಸುವಂತೆ ಪ್ರಾಥಮಿಕ...
ಸುರೇಶ್ ಕುಮಾರ್
ಸುರೇಶ್ ಕುಮಾರ್

ಬೆಂಗಳೂರು: ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿಯನ್ನು ತೋರಿಸಿದರೆ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುವಾಗುವಂತೆ ಸೂಕ್ತ ಸುತ್ತೋಲೆ ಹೊರಡಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರಿಗೆ ಮನವಿ ಮಾಡಿದ್ದಾರೆ.

ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ  ವಾರ್ಷಿಕ ಪರೀಕ್ಷೆಗಳು ಮಾರ್ಚ್ ತಿಂಗಳಿನಿಂದ ಪ್ರಾರಂಭಗೊಳ್ಳಲಿವೆ.  ಪ್ರತಿದಿನ ತಮ್ಮ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪಡೆದುಕೊಂಡಿರುವ ಬಸ್ ಪಾಸ್ ಗಳಲ್ಲಿ ನಿಗದಿತ ಅಂದರೆ ತಮ್ಮ ಪಾಸ್ ನಲ್ಲಿ ನಮೂದಿತ ಮಾರ್ಗಗಳ ಹೊರತಾಗಿಯೂ ಬದಲಾದ ಮಾರ್ಗಗಳಲ್ಲಿ ಸಂಚರಿಸಲು ಅನುವಾಗುವಂತೆ ಅವಕಾಶ ಮಾಡಿಕೊಡಲು ಸಚಿವರು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com