ಹುಬ್ಬಳ್ಳಿಯಲ್ಲಿ ಪಾಕ್ ಪರ ಘೋಷಣೆ: ದೇಶದ್ರೋಹ ಕೇಸ್ ಹಾಕಿದ್ದರೂ ಮೂವರು ವಿದ್ಯಾರ್ಥಿಗಳ ಬಿಡುಗಡೆ!

ಪಾಕ್ ಪರ ಘೋಷಣೆ ಕೂಗಿ ದೇಶದ್ರೋಹ ಪ್ರಕರಣದಡಿ ಬಂಧಿಸಲಾಗಿದ್ದ ಹುಬ್ಬಳ್ಳಿಯ ಕೆಎಲ್ಇ ಕಾಲೇಜಿನ ವಿದ್ಯಾರ್ಥಿಗಳನ್ನು ಪೊಲೀಸರು ಬಾಂಡ್ ಬರೆಸಿಕೊಂಡು ಬಿಡುಗಡೆ ಮಾಡಿದೆ.
ಆರೋಪಿಗಳು
ಆರೋಪಿಗಳು

ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿ ದೇಶದ್ರೋಹ ಪ್ರಕರಣದಡಿ ಬಂಧಿಸಲಾಗಿದ್ದ ಹುಬ್ಬಳ್ಳಿಯ ಕೆಎಲ್ಇ ಕಾಲೇಜಿನ ವಿದ್ಯಾರ್ಥಿಗಳನ್ನು ಪೊಲೀಸರು ಬಾಂಡ್ ಬರೆಸಿಕೊಂಡು ಬಿಡುಗಡೆ ಮಾಡಿದೆ. 

ಸೆಕ್ಷನ್ 169ರ ಅಡಿ ಬಾಂಡ್ ಬರೆಸಿಕೊಂಡು ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿದ್ದು ಪೊಲೀಸರ ಈ ಕಾರ್ಯ ಸಾಕಷ್ಟು ಅನುಮಾನ ಮೂಡಿಸಿವೆ.

ಕರೆದಾಗಲೆಲ್ಲಾ ಬಂದು ವಿಚಾರಣೆಗೆ ಸಹಕರಿಸಬೇಕು ಎಂದು ಬಾಂಡ್ ಬರೆಸಿಕೊಂಡು ಬಿಡುಗಡೆ ಮಾಡಲಾಗಿದೆ. 

ಸೆಕ್ಷನ್ 124ಎ ಜಾಮೀನು ರಹಿತ ಕೇಸ್ ಆಗಿದ್ದರೂ ವಿದ್ಯಾರ್ಥಿಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕಾಶ್ಮೀರದ ಶೋಫಿಯಾನ ಜಿಲ್ಲೆಯ ಆಮಿರ್ ಮೊಹಿದ್ದೀನ್ ವಾನಿ, ಬಾಸೀತ್ ಆಸೀಫ್ ಸೋಫಿ, ತಾಲಿಬ ಮಾಜಿದ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದರು. ಇನ್ನು ಈ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಸಹ ಅಮಾತು ಮಾಡಿತ್ತು.

ಭಾರತ ಸರ್ಕಾರದ ವಿದ್ಯಾರ್ಥಿ ವೇತನ ಪಡೆದು ಕಾಶ್ಮೀರ ಮೂಲದ ಈ ವಿದ್ಯಾರ್ಥಿಗಳು ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com