ಉಡುಪಿ: ಸಾವು ಗೆದ್ದ ರೋಹಿತ್ ಖಾರ್ವಿ, ರಕ್ಷಣೆ ಮಾಡಿದ ಅಗ್ನಿಶಾಮಕ ದಳ

ಉಡುಪಿಯ ಮರವಂತೆಯಲ್ಲಿ ಬೋರ್ ವೆಲ್‍ ಕೆಲಸದ ವೇಳೆ ಮಣ್ಣು ಕುಸಿದು ಪ್ರಾಣಾಪಾಯಕ್ಕೆ ಸಿಲುಕಿದ್ದ ರೋಹಿತ್ ಖಾರ್ವಿ ಎಂಬಾತನನ್ನು ಕೊನೆಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ರಕ್ಷಣೆ ಮಾಡಲಾಗಿದೆ.

Published: 16th February 2020 09:36 PM  |   Last Updated: 16th February 2020 09:36 PM   |  A+A-


man who had fallen into a 15-feet deep hole rescued

ಅಪಾಯದಿಂದ ಪಾರಾದ ರೋಹಿತ್

Posted By : Srinivasamurthy VN
Source : ANI

ಉಡುಪಿ: ಉಡುಪಿಯ ಮರವಂತೆಯಲ್ಲಿ ಬೋರ್ ವೆಲ್‍ ಕೆಲಸದ ವೇಳೆ ಮಣ್ಣು ಕುಸಿದು ಪ್ರಾಣಾಪಾಯಕ್ಕೆ ಸಿಲುಕಿದ್ದ ರೋಹಿತ್ ಖಾರ್ವಿ ಎಂಬಾತನನ್ನು ಕೊನೆಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ರಕ್ಷಣೆ ಮಾಡಲಾಗಿದೆ.

ಉಡುಪಿಯ ಅಗ್ನಿಶಾಮಕ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಇಂದು ಸಂಜೆ ರೋಹಿತ್ ರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬೈಂದೂರು ಬಿಜೆಪಿ ಶಾಸಕ ಸುಕುಮಾರ ಶೆಟ್ಟಿ ಅವರು, ಮರವಂತೆಯ ಅಗ್ನಿಶಾಮಕ ದಳದ ಕಾರ್ಯಾಚರಣೆ ರೋಹಿತ್ ರನ್ನು ರಕ್ಷಿಸಿದ್ದಾರೆ. ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು. ಅಲ್ಲದೆ ರೋಹಿತ್ ಖಾರ್ವಿ ರಕ್ಷಣೆ ಮಾಡಿದ ತಂಡಕ್ಕೆ  ಪ್ರಶಸ್ತಿ ಘೋಷಣೆ ಮಾಡಿದ್ದಾರೆ. ಮರವಂತೆಯ ಅಗ್ನಿಶಾಮಕ ದಳದ ಕಾರ್ಯಾಚರಣೆಯಲ್ಲಿ ತೊಡಗಿದವರಿಗೆ 25 ಸಾವಿರ ನಗದು ನೀಡಿ, ಮರವಂತೆಯಲ್ಲೇ ಸನ್ಮಾನ ಮಾಡುತ್ತೇನೆ. ಇದು ನನ್ನ ವೈಯಕ್ತಿಕ ಮೊತ್ತ ಎಂದು ಸುಕುಮಾರ ಶೆಟ್ಟಿ ಹೇಳಿದರು.

ಅಲ್ಲದೆ ಯುವಕ ರೋಹಿತ್ ಖಾರ್ವಿಗೆ ಯಾವುದೇ ಗಾಯವಾಗದಂತೆ ರಕ್ಷಣೆಯಾಗಿದೆ. ಕೊಲ್ಲೂರು ಮೂಕಾಂಬಿಕಾ ದೇವಿ ಎಲ್ಲರಿಗೂ ಶಕ್ತಿ ಕೊಟ್ಟಳು. ಅಗ್ನಿಶಾಮಕ, ಜಿಲ್ಲಾಡಳಿತ ಕಾರ್ಯ ಯಶಸ್ವಿಯಾಗಿದೆ. ಘಟನಾ ಸ್ಥಳದಲ್ಲಿ ಸ್ಥಳೀಯರು, ಮಾಧ್ಯಮಗಳು ನಿರಂತರ ಕೆಲಸ ಮಾಡಿವೆ. ಅವರೆಲ್ಲರಿಗೂ ಅಭಿನಂದನೆ ಎಂದು ಹೇಳಿದರು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅಪಾಯಕ್ಕೆ ಸಿಲುಕಿದ್ದ ರೋಹಿತ್ ಮಾತನಾಡಿದ್ದು, 'ಇದು ಅಜಾಗರೂಕತೆ ಅಲ್ಲ, ಆಕಸ್ಮಿಕವಾಗಿ ನಡೆದ ಘಟನೆಯಾಗಿದೆ. ನಾವು ನಾಲ್ಕು ಜನ ಬೋರ್‍ವೆಲ್ ಕೆಲಸಕ್ಕೆ ತೆರಳಿದೆವು. ನಮ್ಮ ಕೆಲಸ ಅಂತಿಮ ಹಂತದಲ್ಲಿತ್ತು. ಏಕಾಏಕಿ ಸುತ್ತ ಇದ್ದ ಮಣ್ಣು ಸುಮಾರು ಹದಿನೈದು ಅಡಿ ಕೆಳಕ್ಕೆ ಕುಸಿಯಿತು. ನಮ್ಮದು ಯಾವುದೇ ಕಾರಣಕ್ಕೆ ಅಜಾಗರೂಕತೆಯಲ್ಲ. ಆಕಸ್ಮಿಕವಾಗಿ ನಡೆದ ಘಟನೆ ಇದು. 25 ವರ್ಷದಿಂದ ಈ ಕೆಲಸ ಮಾಡುತ್ತಿದ್ದೇನೆ. ಹಿಂದೆಂದೂ ಹೀಗಾಗಿಲ್ಲ. ಗದ್ದೆಯ ಮಣ್ಣು ಮೃದುವಾಗಿದ್ದರಿಂದ ನಾನು ಕುಸಿದು ಬಿದ್ದೆ. ನನ್ನ ಎದೆಯ ಮಟ್ಟದವರೆಗೆ ಮಣ್ಣು ಬಿದ್ದಿತ್ತು. ನಾನೇ ಮೇಲೇಳಲು ಪ್ರಯತ್ನಿಸಿದೆ. ಆದರೆ ಸಾಧ್ಯವಾಗಲಿಲ್ಲ, ಈ ತರಹದ ಅನುಭವ ಇದೇ ಮೊದಲು ಎಂದು ಹೇಳಿದರು.

Stay up to date on all the latest ರಾಜ್ಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp