ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ: ಟೆಕ್ಕಿ ಸಾವು

ಸ್ಕೂಟರ್‌ಗೆ ನೀರು ಸರಬರಾಜು ಟ್ಯಾಂಕರ್ ಡಿಕ್ಕಿ ಹೊಡದ ಪರಿಣಾಮ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು ಮೃತಪಟ್ಟಿರುವ ಘಟನೆ ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.

Published: 16th February 2020 10:14 PM  |   Last Updated: 16th February 2020 10:14 PM   |  A+A-


Water tanker hits bike, man dies in Bengaluru

ಸಂಗ್ರಹ ಚಿತ್ರ

Posted By : Srinivasamurthy VN
Source : UNI

ಬೆಂಗಳೂರು: ಸ್ಕೂಟರ್‌ಗೆ ನೀರು ಸರಬರಾಜು ಟ್ಯಾಂಕರ್ ಡಿಕ್ಕಿ ಹೊಡದ ಪರಿಣಾಮ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು ಮೃತಪಟ್ಟಿರುವ ಘಟನೆ ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ಇಂದಿರಾನಗರದ ಶ್ರೇಯಶ್. ಡಿ ಆಚಾರ್ಯ (26) ಮೃತಪಟ್ಟ ಸಾಫ್ಟ್ ವೇರ್ ಇಂಜಿನಿಯರ್. ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಆಚಾರ್ಯ ಅವರು, ಡಿಯೋ ಸ್ಕೂಟರ್‌ನಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಮಾರತ್‌ಹಳ್ಳಿಯಿಂದ ವೈಟ್‌ಫೀಲ್ಡ್ ಕಡೆಗೆ ಬರುತ್ತಿದ್ದಾಗ ಏಕಮುಖ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ವಾಟರ್ ಟ್ಯಾಂಕರ್ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

ಆಚಾರ್ಯ ಅವರ ತಂದೆ ದಿವಾಕರ ಅವರು ಅಂಚೆ ಕಚೇರಿಯ ನಿವೃತ್ತ ನೌಕರರಾಗಿದ್ದಾರೆ. ಅವರಿಗೆ ಆಚಾರ್ಯ ಒಬ್ಬನೇ ಪುತ್ರನಾಗಿದ್ದು, ಮಗಳನ್ನು 4 ತಿಂಗಳ ಹಿಂದಷ್ಟೇ ವಿವಾಹ ಮಾಡಲಾಗಿತ್ತು ಎಂದು ಪ್ರಕರಣ ದಾಖಲಿಸಿಕೊಂಡಿರುವ ವೈಟ್‌ಫೀಲ್ಡ್ ಸಂಚಾರ ಪೊಲೀಸರು ತಿಳಿಸಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp