ಸಾಕ್ಷ್ಯಾಧಾರ ಕೊರತೆ: ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳ ಬಿಡುಗಡೆ

ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಇಲ್ಲಿನ ಕೆಎಲ್ಇ ಎಂಜಿನಿಯರಿಂಗ್ ಕಾಲೇಜಿನ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳನ್ನು ಸಾಕ್ಷ್ಯಾಧಾರದ ಕೊರತೆ ಹಿನ್ನೆಲೆಯಲವ್ಲಿ ಮಹಾನಗರ ಪೊಲೀಸರು ಭಾನುವಾರ ಬಿಡುಗಡೆ ಮಾಡಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಇಲ್ಲಿನ ಕೆಎಲ್ಇ ಎಂಜಿನಿಯರಿಂಗ್ ಕಾಲೇಜಿನ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳನ್ನು ಸಾಕ್ಷ್ಯಾಧಾರದ ಕೊರತೆ ಹಿನ್ನೆಲೆಯಲವ್ಲಿ ಮಹಾನಗರ ಪೊಲೀಸರು ಭಾನುವಾರ ಬಿಡುಗಡೆ ಮಾಡಿದ್ದಾರೆ. 

ವಿದ್ಯಾರ್ಥಿಗಳ ಬಿಡುಗಡೆ ಮಾಡಿದ್ದಕ್ಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಬಜರಂಗದಳ, ವಿಹಿಂಪ ಸಂಘಟನಗೆಳು ಇಲ್ಲಿನ ಗೋಕುಲ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಆರಂಭಿಸಿದ್ದಾರೆ. 

ಸಿಆರ್'ಪಿಸಿ 169 (ಸಾಕ್ಷ್ಯಾಧಾರದ ಕೊರತೆ) ಅಡಿ ಬಾರಾಮುಲ್ಲಾ ನಿವಾಸಿ ಬಾಸಿತ್ ಆಶಿಕ್ ಸೊಪಿಯಾ, ಕಾಶ್ಮೀರದ ತಾಲೀಬ್ ಮಜೀದ್, ಕಾಶ್ಮೀರದ ಅನಂತ್ ನಾಗ ನಿವಾಸಿ ಅಮೀರ್ ಮೊಯಿನುದ್ದೀನ್, ಅವರನ್ನು ಬಿಡುಗಡೆ ಮಾಡಲಾಗಿದೆ. 

ಸಾಕ್ಷ್ಯ ಕಳೆ ಹಾಕುವ ಪ್ರಯತ್ನ ಮಾಡಲಾಗುವುದು ಎಂದು ಇದೇ ವೇಳೆ ಪೊಲೀಸ್ ಆಯುಕ್ತ ಆರ್.ದಿಲೀಪ್ ತಿಳಿಸಿದ್ದಾರೆ. ಪುಲ್ವಾಮಾ ದಾಳಿ ಸ್ಮರಣಾರ್ಥ ಶುಕ್ರವಾರ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದ ಬಳಿಕ, ಈ ಮೂವರು ವಿದ್ಯಾರ್ಥಿಗಳು ಪಾಕ್ ಸೇನೆಯ ಹಾಡಿಗೆ ದನಿಗೂಡಿಸುತ್ತ ಪಾಕಿಸ್ತಾನ ಜಿಂದಾಬಾದ್ ಮತ್ತು ಪಾಕಿಸ್ತಾನ ಆಜಾದಿ ಎಂದು ಘೋಷಣೆ ಕೂಗಿದ್ದರು, 

ಈ ನಡುವೆ ಪಾಕಿಸ್ತಾನದ ಪರ ಘೋಷಣೆ ಕೂಗಿ ದೇಶದ್ರೋಹದ ಆರೋಪ ಎದಪರಿಸುತ್ತಿರುವ ಕಾಶ್ಮೀರ ವಿದ್ಯಾರ್ಥಿಗಳ ಪರ ಯಾರೂ ವಕಾಲತ್ತು ವಹಿಸದಿರುವ ನಿರ್ಣಯಕ್ಕೆ ಹುಬ್ಬಳ್ಳಿ ವಕೀಲಸ ಸಂಘ ಬಂದಿದೆ. 

ಈ ಸಂಬಂಧ ಭಾನುವಾರ ಸಂಜೆ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಹುಬ್ಬಳ್ಳಿ ಬಾರ್ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಗುರು ಹಿರೇಮಠ ಅವರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com