ಕೆಎಲ್ ಇ ವಿದ್ಯಾರ್ಥಿಗಳ ವಿರುದ್ಧದ ದೇಶದ್ರೋಹ ಆರೋಪ ಕೈಬಿಡುವಂತೆ ಅಮಿತ್ ಶಾ, ಯಡಿಯೂರಪ್ಪಗೆ ಕಾಶ್ಮೀರ ವಿದ್ಯಾರ್ಥಿ ಸಂಘಟನೆ ಆಗ್ರಹ

ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ದೇಶದ್ರೋಹದ ಪ್ರಕರಣ ಕೈಬಿಡುವಂತೆ ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿ...
ಬಂಧಿತ ಕಾಶ್ಮೀರಿ ವಿದ್ಯಾರ್ಥಿಗಳು
ಬಂಧಿತ ಕಾಶ್ಮೀರಿ ವಿದ್ಯಾರ್ಥಿಗಳು

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ದೇಶದ್ರೋಹದ ಪ್ರಕರಣ ಕೈಬಿಡುವಂತೆ ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿ ಸಂಘಟನೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಆಗ್ರಹಿಸಿದೆ. ಅಲ್ಲದೆ ವಿದ್ಯಾರ್ಥಿಗಳ ಅಮಾನತು ಆದೇಶವನ್ನೂ ಹಿಂಪಡೆಯುವಂತೆ ವಿಶ್ವವಿದ್ಯಾಲಯಕ್ಕೆ ಒತ್ತಾಯಿಸಿದೆ.

ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿದ್ದು ತಪ್ಪು ಮತ್ತು ಇದನ್ನು ನಾವು ಖಂಡಿಸುತ್ತೇವೆ. ಆದರೆ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿರುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇದರಿಂದ ಅವರ ಭವಿಷ್ಯ ಹಾಳಾಗಲಿದೆ ಎಂದು ಕಾಶ್ಮೀರ ವಿದ್ಯಾರ್ಥಿ ಸಂಘಟನೆಯ ವಕ್ತಾರ ನಾಸಿರ್ ಖುಹೆಮಿ ಅವರು ಹೇಳಿದ್ದಾರೆ.

ದೇಶದ್ರೋಹದ ಪ್ರಕರಣದಿಂದ ವಿದ್ಯಾರ್ಥಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಕೇಂದ್ರ ಗೃಹ ಸಚಿವರು ಹಾಗೂ ಕರ್ನಾಟಕ ಮುಖ್ಯಮಂತ್ರಿಗಳು ಕೂಡಲೇ ಅವರ ವಿರುದ್ಧ ದಾಖಲಿಸಿರುವ ದೇಶದ್ರೋಹದ ಆರೋಪ ಕೈಬಿಡಬೇಕು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳಾದ ತಾಲೀಬ್ ಮಜೀದ್, ಆಮಿರ್ ಮೊಹಿ ಉದ್ದಿನ್ ಹಾಗೂ ಬಸೀತ್‌ ಆಶಿಖ್ ಸೋಫಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದು, ಮಾರ್ಚ್ 2ರ ವರೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com