ಸಿಎಎ ಬೆಂಬಲಿಸಿ ಕರ್ನಾಟಕ ಸರ್ಕಾರ ನಿರ್ಣಯ ಮಂಡಿಸುವ ಸಾಧ್ಯತೆ 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಪ್ರತಿಭಟನೆ ಮುಂದುವರೆದಿರುವಂತೆ ಪ್ರಸ್ತುತ ಅಧಿವೇಶನದಲ್ಲಿ ಈ ಕಾಯ್ದೆಯನ್ನು ಬೆಂಬಲಿಸಿ ನಿರ್ಣಯ ಮಂಡಿಸಲು ಆಡಳಿತರೂಢ ಬಿಜೆಪಿ ಮುಂದಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಪ್ರತಿಭಟನೆ ಮುಂದುವರೆದಿರುವಂತೆ ಪ್ರಸ್ತುತ ಅಧಿವೇಶನದಲ್ಲಿ ಈ ಕಾಯ್ದೆಯನ್ನು ಬೆಂಬಲಿಸಿ ನಿರ್ಣಯ ಮಂಡಿಸಲು ಆಡಳಿತರೂಢ ಬಿಜೆಪಿ ಮುಂದಾಗಿದೆ.

ಮಾರ್ಚ್ 2 ಮತ್ತು 3 ರಂದು ರಾಜ್ಯ ವಿಧಾನಸಭೆಯ ಉಭಯ ಸದನಗಳಲ್ಲಿ ಸಂವಿಧಾನದ ಕುರಿತು ನಡೆಯಲಿರುವ ಎರಡು ದಿನಗಳ ಚರ್ಚೆಯ ಕೊನೆಯಲ್ಲಿ ನಿರ್ಣಯವನ್ನು ಅಂಗೀಕರಿಸುವ ಸಾಧ್ಯತೆ ಇದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಆದಾಗ್ಯೂ, ನಿರ್ಣಯ ಮಂಡಿಸಲು ಪಕ್ಷ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ.

ಆದಾಗ್ಯೂ, ಪಕ್ಷ ಇಂತಹ ನಿರ್ಣಯ ಮಂಡಿಸುವ ಅಗತ್ಯ ಇಲ್ಲ ಎಂದು ಹಿರಿಯ ಸಚಿವರೊಬ್ಬರು ಹೇಳಿದ್ದಾರೆ. ಅಲ್ಪಸಂಖ್ಯಾತ ಹಿಂದೂ, ಸಿಖ್ಖರು, ಜೈನರು, ಕ್ರಿಶ್ಚಿಯನ್ನರು, ಪಾರ್ಸಿಗಳು ಮತ್ತು ಬೌದ್ದರಿಗೆ ಪೌರತ್ವ ಒದಗಿಸುವ ಈ ಕಾಯ್ದೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆರಂಭದಲ್ಲಿಯೇ ಹೇಳಿಕೆ ನೀಡಿದ್ದರು. 

ಸಿಎಎ ಬೆಂಬಲಿಸಿ ನಿರ್ಣಯ ಮಂಡಿಸಲು ಅಥವಾ ಚರ್ಚೆಗೆ ಬಿಜೆಪಿ ಮುಂದಾದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ತೀವ್ರ ವಿರೋಧ ವ್ಯಕ್ತವಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com