ಪೊಲೀಸ್ ನೇಮಕಾತಿ: ಮಹಿಳೆಯರ ಮೀಸಲಾತಿಯಲ್ಲಿ ಶೇ. 5 ರಷ್ಟು ಏರಿಕೆ 

ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಮಹಿಳೆಯರ ಮೀಸಲಾತಿ ಪ್ರಮಾಣವನ್ನು ರಾಜ್ಯಸರ್ಕಾರ ಸೋಮವಾರ ಏರಿಕೆ ಮಾಡಿದೆ
ಮಹಿಳಾ ಪೊಲೀಸ್ ಅಧಿಕಾರಿಗಳು
ಮಹಿಳಾ ಪೊಲೀಸ್ ಅಧಿಕಾರಿಗಳು

ಬೆಂಗಳೂರು: ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಮಹಿಳೆಯರ ಮೀಸಲಾತಿ ಪ್ರಮಾಣವನ್ನು ರಾಜ್ಯಸರ್ಕಾರ ಸೋಮವಾರ ಏರಿಕೆ ಮಾಡಿದೆ

ಪೊಲೀಸ್ ನೇಮಕಾತಿಯಲ್ಲಿ ಮಹಿಳೆಯರಿಗೆ ಪ್ರಸ್ತುತವಿರುವ ಮೀಸಲಾತಿ ಪ್ರಮಾಣವನ್ನು ಶೇ. 20 ರಿಂದ ಶೇ, 25ಕ್ಕೆ ಹೆಚ್ಚಿಸಲು ನಮ್ಮ ಸರ್ಕಾರ ಅನುಮೋದನೆ ನೀಡಿದೆ ಎಂದು ರಾಜ್ಯಪಾಲ ವಾಜೂಭಾಯಿ ವಾಲಾ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.

ಪ್ರಸ್ತುತ ಸಬ್ ಇನ್ಸ್ ಪೆಕ್ಟರ್ , ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಯಲ್ಲಿ ಮಹಿಳೆಯರಿಗೆ ರಾಜ್ಯ ಸರ್ಕಾರ ಶೇ. 20 ರಷ್ಟು ಮೀಸಲಾತಿಯನ್ನು ನೀಡುತಿತ್ತು. ಇದೀಗ ಅದನ್ನು ಶೇ. 25ಕ್ಕೆ ಹೆಚ್ಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಿಸಿದ ಕೇಸ್ ಗಳ ನಿರ್ವಹಣೆಗಾಗಿ ಮಹಿಳಾ ಅಧಿಕಾರಿಗಳ ಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶದೊಂದಿಗೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. 

ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಬೆಂಗಳೂರು ದಕ್ಷಿಣ ಡಿಸಿಪಿ ಡಾ. ರೋಹಿಣಿ ಕಾಟೊಚ್, ಮಹಿಳಾ ಅಧಿಕಾರಿಗಳ ಹೆಚ್ಚಳದಿಂದ ಪೊಲೀಸ್ ಪಡೆಯಲ್ಲಿ ಉತ್ತಮ ಪ್ರಗತಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

650 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹಾಗೂ 16 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಬಾಕಿ ಇದ್ದು, ಎರಡು ವರ್ಷದೊಳಗೆ ಭರ್ತಿ ಮಾಡುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಇತ್ತೀಚಿಗೆ ಹೇಳಿಕೆ ನೀಡಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ  ಹೆಚ್ಚಿನ ಭದ್ರತಾ ವ್ಯವಸ್ಥೆಯ ಕಾರಾಗೃಹ ಸ್ಥಾಪಿಸುವುದಾಗಿ  ಎಂದು ರಾಜ್ಯಸರ್ಕಾರ ಘೋಷಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com