ಎಲೆಕ್ಟ್ರಾನಿಕ್ಸ್ ವಿನ್ಯಾಸ, ಉತ್ಪಾದನಾ ಕ್ಷೇತ್ರ ಇ.ಎಸ್.ಡಿ.ಎಂ ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಉದ್ಯಮಿಗಳು ಕೈಜೋಡಿಸಬೇಕು: ಜಗದೀಶ್ ಶೆಟ್ಟರ್

ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ವಿನ್ಯಾಸ, ಉತ್ಪಾದನಾ ಕ್ಷೇತ್ರ ಇ.ಎಸ್.ಡಿ.ಎಂ ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದು ಸರ್ಕಾರದೊಂದಿಗೆ ಭಾಗೀದಾರರಾಗಿ ಈ ಕ್ಷೇತ್ರವನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯಲು ಉದ್ಯಮಿಗಳು ಸಹಕರಿಸಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕರೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಶೆಟ್ಟರ್ ಸಭೆ
ವಿಧಾನಸೌಧದಲ್ಲಿ ಶೆಟ್ಟರ್ ಸಭೆ

ಬೆಂಗಳೂರು: ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ವಿನ್ಯಾಸ, ಉತ್ಪಾದನಾ ಕ್ಷೇತ್ರ ಇ.ಎಸ್.ಡಿ.ಎಂ ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದು ಸರ್ಕಾರದೊಂದಿಗೆ ಭಾಗೀದಾರರಾಗಿ ಈ ಕ್ಷೇತ್ರವನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯಲು ಉದ್ಯಮಿಗಳು ಸಹಕರಿಸಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕರೆ ನೀಡಿದ್ದಾರೆ.

ಎಲೆಕ್ಟ್ರಾನಿಕ್ಸ್ ಸಿಸ್ಟಮ್ ವಿನ್ಯಾಸ ಮತ್ತು ಉತ್ಪಾದನೆ – ಇ.ಎಸ್.ಡಿ.ಎಂ ವಲಯದಲ್ಲಿ ಕರ್ನಾಟಕ ಅಂತರ್ಗವಾಗಿಯೇ ಗಮನಾರ್ಹ ಸಾಧನೆಮಾಡಿದ್ದು, ಇದೀಗ ಸರ್ಕಾರದೊಂದಿಗೆ ಭಾಗೀದಾರರಾಗಿ ಈ ಕ್ಷೇತ್ರವನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯಲು ಉದ್ಯಮಿಗಳು ಮುಂದಾಗಬೇಕು ಎಂದು ಶೆಟ್ಟರ್ ಹೇಳಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸಹಯೋಗದೊಂದಿಗೆ “ ಜಾಗತಿಕವಾಗಿ ಇ.ಎಸ್.ಡಿ.ಎಂ. ಕ್ಲಸ್ಟರ್ ಗಳನ್ನು ಸ್ಪರ್ಧಾತ್ಮಕವಾಗಿ ಅಭಿವೃದ್ಧಿಪಡಿಸುವ” ಕುರಿತಂತೆ ನಗರದಲ್ಲಿ ಬುಧವಾರ ಆಯೋಜಿಸಲಾದ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ ನಿರ್ದಿಷ್ಟ ಉತ್ಪನ್ನಗಳನ್ನು ಉತ್ಪಾದಿಸುವ ಕೈಗಾರಿಕಾ ಕ್ಲಸ್ಟರ್ ಅಭಿವೃದ್ಧಿ ಯೋಜನೆಯಡಿ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಅಂಡ್ ಮ್ಯಾನ್ಯುಫೆಕ್ಚರಿಂಗ್ ಕ್ಷೇತ್ರಕ್ಕೆ ಆದ್ಯತೆ ನೀಡಲಾಗಿದೆ. ಈ ವಲಯದಲ್ಲಿ ಕರ್ನಾಟಕ ಬಲಿಷ್ಠವಾಗಿದ್ದು, ಬಂಡವಾಳ ಹೂಡಲು ಉದ್ಯಮಿಗಳಿಗೆ ವಿಪುಲ ಅವಕಾಶಗಳಿವೆ ಎಂದರು.

ಈಗಾಗಲೇ ಮೈಸೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇ.ಎಸ್.ಡಿ.ಎಂ ಕ್ಲಸ್ಟರ್ ಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಹುಬ್ಬಳ್ಳಿ ಮತ್ತು ಕೋಲಾರ ಜಿಲ್ಲೆಗಳನ್ನು ಸಹ ಈ ಕ್ಷೇತ್ರಕ್ಕೆ ಸೇರ್ಪಡೆ ಮಾಡಲು ಪರಿಶೀಲನೆ ಮಾಡಲಾಗುತ್ತಿದೆ. ಇದೀಗ ಕೈಗಾರಿಕೋದ್ಯಮಿಗಳು ಕೈ ಜೋಡಿಸಿ ಈ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಬೇಕು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com