ಉತ್ತರ ಕರ್ನಾಟಕ: ಪ್ರವಾಹ ಪೀಡಿತ ಶಾಲೆಗಳ ಪುನರ್ ನಿರ್ಮಾಣಕ್ಕೆ ನಬಾರ್ಡ್ ಧನಸಹಾಯ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ತನ್ನ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯ ಮೂಲಕ ಉತ್ತರ ಕರ್ನಾಟಕದ 26 ಜಿಲ್ಲೆಗಳ 3,386 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪುನರ್ನಿರ್ಮಾಣಕ್ಕೆ ಧನಸಹಾಯ ನೀಡಲು ಒಪ್ಪಿದೆ.
ನಬಾರ್ಡ್
ನಬಾರ್ಡ್

ಬೆಂಗಳೂರು: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ತನ್ನ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯ ಮೂಲಕ ಉತ್ತರ ಕರ್ನಾಟಕದ 26 ಜಿಲ್ಲೆಗಳ 3,386 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪುನರ್ನಿರ್ಮಾಣಕ್ಕೆ ಧನಸಹಾಯ ನೀಡಲು ಒಪ್ಪಿದೆ.

ಕಳೆದ ವರ್ಷ ಪ್ರವಾಹದಿಂದ ಉಂಟಾದ ನಷ್ಟಕ್ಕಾಗಿ 758.073 ಕೋಟಿ ರೂ.ಗಳ ನಿಧಿಯನ್ನು ಬಿಡುಗಡೆ ಮಾಡಲಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಮಂಗಳವಾರ ಆದೇಶ ಹೊರಡಿಸಿದ್ದು, ಶಾಲೆಗಳ ಸ್ಪಾಟ್ ಸಮೀಕ್ಷೆ ನಡೆಸುವಂತೆ ಸಾರ್ವಜನಿಕ ಶಿಕ್ಷಣದ ಉಪ ನಿರ್ದೇಶಕರಿಗೆ ಸೂಚಿಸಿದೆ.

ಲೋಕೋಪಯೋಗಿ ಇಲಾಖೆಯೊಂದಿಗೆ ಅಂದಾಜು ಮಾಡಿ, ಆಡಳಿತಾತ್ಮಕ ಅನುಮೋದನೆ ಪಡೆದು, 15 ದಿನಗಳಲ್ಲಿ ವರದಿಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸಲ್ಲಿಸುವಂತೆ ತಿಳಿಸಿದೆ. ಒಂದು ವೇಳೆ  ಅವರು ಹಾಗೆ ಮಾಡಲು ವಿಫಲವಾದರೆ, ನಬಾರ್ಡ್ ಅನುಮೋದನೆಯನ್ನು ರದ್ದುಗೊಳಿಸುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com