ಮುಖ್ಯಮಂತ್ರಿ ಭೇಟಿ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆದ ರೈತರು

ಬಿಡಿಎಯು ಪೆರಿರೆರಲ್ ರಿಂಗ್ ರಸ್ತೆ ಯೋಜನೆ ಸ್ವಾಧೀನ ಪಡಿಸಿಕೊಳ್ಳುತ್ತಿರುವ ರೈತರ ಭೂಮಿಗೆ ನ್ಯಾಯಯುತವಾದ ಪರಿಹಾರ ನೀಡುವಂತೆ ಆಗ್ರಹಿಸಿ ಬಿಡಿಎ ಕಚೇರಿ ಮುಂದೆ ನಡೆಸಲಾಗುತ್ತಿದ್ದ ಪ್ರತಿಭಟನೆಯನ್ನು ರೈತರು ಹಿಂಪಡೆದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬಿಡಿಎಯು ಪೆರಿರೆರಲ್ ರಿಂಗ್ ರಸ್ತೆ ಯೋಜನೆ ಸ್ವಾಧೀನ ಪಡಿಸಿಕೊಳ್ಳುತ್ತಿರುವ ರೈತರ ಭೂಮಿಗೆ ನ್ಯಾಯಯುತವಾದ ಪರಿಹಾರ ನೀಡುವಂತೆ ಆಗ್ರಹಿಸಿ ಬಿಡಿಎ ಕಚೇರಿ ಮುಂದೆ ನಡೆಸಲಾಗುತ್ತಿದ್ದ ಪ್ರತಿಭಟನೆಯನ್ನು ರೈತರು ಹಿಂಪಡೆದಿದ್ದಾರೆ. 

ಬೆಂಗಳೂರು ನಗರಾಭಿವೃದ್ಧಿ ಸಚಿವ ಬಿಎ.ಬಸವರಾಜ್ ಅವರು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸುವ ಭರವಸೆ ನೀಡಿದ ಹಿನ್ನಲೆಯಲ್ಲಿ ರೈತರು ಪ್ರತಿಭಟನೆಯನ್ನು ಹಿಂಪಡೆದಿದ್ದಾರೆಂದು ತಿಳಿದುಬಂದಿದೆ. 

ರೈತರ ತೀವ್ರಗೊಂಡ ಆಗ್ರಹ ಹಿನ್ನೆಲೆಯಲ್ಲಿ ಭೂಮಿಗೆ ಸರ್ಕಾರ ನಿಗದಿಪಡಿಸಿದ್ದ ಹಣಕ್ಕಿಂತಲೂ ಹೆಚ್ಚಿನ ಹಣ ನೀಡಲು ಅಧಿಕಾರಿಗಳು ಒಪ್ಪಿಗೆ ನೀಡಿದ್ದಾರೆ. ಅಲ್ಲದೆ, ಈ ಬಗ್ಗೆ ಸೋಮವಾರ ಅಥವಾ ಮಂಗಳವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಸಭೆ ನಡೆಸುವುದಾಗಿ ಬಸವರಾಜ್ ಅವರು ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ಹಿಂಪಡೆದಿದ್ದಾರೆಂದು ವರದಿಗಳು ತಿಳಿಸಿವೆ. 

ಪೆರಿಪೆರಲ್ ರಿಂಗ್ ರಸ್ತೆ ಯೋಜನೆಗೆ ಸರ್ಕಾರ 65 ಕಿಲೋ ಮೀಟರ್ ವರೆಗೂ ರೈತರ ಭೂಮಿಯನ್ನು ಬಿಡಿಎ ವಶಪಡಿಸಿಕೊಂಡಿತ್ತು. ಆದರೆ, ಸ್ವಾಧೀನ ಮಾಡಿಕೊಂಡಿರುವ ರೈತರ ಭೂಮಿಗೆ ಸರ್ಕಾರ ನಿಗದಿ ಬೆಲೆ ನೀಡಿರಲಿಲ್ಲ. ರೈತರ ಭೂಮಿಗೆ ಎಕರೆಗೆ ರೂ.5 ಕೋಟಿ ನೀಡಬೇಕೆಂದು ರೈತರು ಆಗ್ರಹಿಸಿದ್ದರು. 

ಪ್ರತಿಭಟನೆ ಕುರಿತತೆ ಪ್ರತಿಕ್ರಿಯೆ ನೀಡಿರುವ ಬಕರ್ನಾಟಕ ರಾಜ್ಯ ರೈತ ಸಂಘದ ಬೆಂಗಳೂರು ಜಿಲ್ಲಾಧ್ಯಕ್ಷ ಎನ್.ರಘು ಅವರು, ಪರಿಹಾರ ನೀಡುವುದಾಗಿ ತಿಳಿಸಿ ನಮ್ಮಿಂದ ಭೂಮಿಯನ್ನು ಪಡೆಯಲಾಗಿತ್ತು. ರೂ.16000 ಕೋಟಿ ಸರ್ಕಾರ ನೀಡಬೇಕಿತ್ತು. ಆದರೆ, ಇದೀಗ ಸರ್ಕಾರ ರೂ.8,350 ಕೋಟಿ ನೀಡಲು ಮುಂದಾಗಿದೆ. ಆದರೆ, ಇಂದಿನ ಮಾರುಕಟ್ಟೆ ಬೆಲೆಗೆ ಇದು ಅತ್ಯಂತ ಕಡಿಮೆಯಾಗಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com