ವಿವಾದಾತ್ಮಕ '15 ಕೋಟಿ ಮುಸ್ಲಿಮರು ಹೇಳಿಕೆ': ಕಲಬುರಗಿಯಲ್ಲಿ ವಾರಿಸ್ ಪಠಾಣ್ ವಿರುದ್ಧ ಎಫ್ಐಆರ್ ದಾಖಲು

ದೇಶದಲ್ಲಿರುವ ನೂರು ಕೋಟಿ ಹಿಂದೂಗಳನ್ನು ಮಣಿಸಲು 15 ಕೋಟಿ ಮುಸ್ಲಿಮರು ಸಾಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಎಐಎಂಐಎಂ ಮುಖಂಡ ವಾರಿಸ್‌ ಪಠಾಣ್ ವಿರುದ್ಧ ಕಲಬುರಗಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ವಾರಿಸ್ ಪಠಾಣ್
ವಾರಿಸ್ ಪಠಾಣ್

ಕಲಬುರಗಿ: ದೇಶದಲ್ಲಿರುವ ನೂರು ಕೋಟಿ ಹಿಂದೂಗಳನ್ನು ಮಣಿಸಲು 15 ಕೋಟಿ ಮುಸ್ಲಿಮರು ಸಾಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಎಐಎಂಐಎಂ ಮುಖಂಡ ವಾರಿಸ್‌ ಪಠಾಣ್ ವಿರುದ್ಧ ಕಲಬುರಗಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಕಲಬುರಗಿ ಪೊಲೀಸರು ಪಠಾಣ್ ವಿರುದ್ಧ ಐಪಿಸಿ ಸೆಕ್ಸೆನ್ 117, 150(ದಂಗೆಗೆ ಪ್ರಚೋದನೆ ನೀಡುವುದು) ಮತ್ತು 153ಎ ಅಡಿ ಕೇಸ್ ದಾಖಲಿಸಿದ್ದಾರೆ.

ಕಳೆದ ಫೆಬ್ರವರಿ 16ರಂದು ಕಲಬುರಗಿಯಲ್ಲಿ ನಡೆದ ಸಿಎಎ ವಿರೋಧಿ ರ್ಯಾಲಿಯಲ್ಲಿ ಮಾತನಾಡಿದ್ದ ಪಠಾಣ್, ನಾವು ಎಲ್ಲರೂ ಒಟ್ಟಿಗೆ ಹೋಗಬೇಕು. ನಮಗೂ ಸ್ವಾತಂತ್ರ್ಯ ಬೇಕು. ಆದರೆ ಇದನ್ನು ಕೇಳಿ ಪಡೆಯಲು ಸಾಧ್ಯವಿಲ್ಲ. ಇವುಗಳನ್ನು ನಾವು ಬಲವಂತದಿಂದ ಪಡೆಯುವ ಸ್ಥಿತಿ ಬಂದಿದೆ. ನೆನಪಿಡಿ, ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ 15 ಕೋಟಿ ಕಮ್ಮಿಯೇ ಇರಬಹುದು. ಆದರೆ, ಅಗತ್ಯಬಿದ್ದರೆ 100 ಕೋಟಿ ಬಹುಸಂಖಾತರಿಗೆ ತಕ್ಕ ತಿರುಗೇಟು ನೀಡಬಲ್ಲರು ಎಂದು ಹೇಳಿಕೆ ನೀಡಿದ್ದರು.

ಇನ್ನು ಪಠಾಣ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ ಮತ್ತು ಶಿವಸೇನೆ, ಎಐಎಂಐಎಂ ಮುಖಂಡನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com