ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭಿಸಲು ಚಿಂತನೆ: ಎಸ್.ಸುರೇಶ್ ಕುಮಾರ್
ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ಪ್ರಾರಂಭಿಸಲು ಚಿಂತನೆ ನಡೆಸಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ
Published: 22nd February 2020 06:12 PM | Last Updated: 22nd February 2020 06:12 PM | A+A A-

ಸಚಿವ ಎಸ್. ಸುರೇಶ್ ಕುಮಾರ್
ತುಮಕೂರು: ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ಪ್ರಾರಂಭಿಸಲು ಚಿಂತನೆ ನಡೆಸಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಹಾಗೂ ಶಾಲಾ ಕೊಠಡಿ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಬಡ ಇಲಾಖೆಯಾದರೂ ಉತ್ತಮ ಕಾರ್ಯ ನಿರ್ವಹಿಸಲು ಅವಕಾಶವಿದೆ, ನನ್ನ ತಾಯಿ ಶಿಕ್ಷಕಿಯಾಗಿದ್ದರಿಂದ ನನಗೆ ಶಿಕ್ಷಣ ಇಲಾಖೆಯ ಋಣ ತೀರಿಸುವ ಅವಕಾಶ ಸಿಕ್ಕಿದೆ, ಶಿಕ್ಷಣ ಇಲಾಖೆ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದು ಹೇಳಿದರು
ಸರ್ಕಾರಿ ಶಾಲೆಗಳಲ್ಲಿ ಕೊಠಡಿ ಸಮಸ್ಯೆ ಇದ್ದು, ಕೊಠಡಿ ಸಮಸ್ಯೆಗಳ ಬಗ್ಗೆ ಡಿಡಿಪಿಐಗಳಿಂದ ಮಾಹಿತಿ ಪಡೆದು ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು ಎಂದರು.ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳು ಯಾವುದೇ ಕಾರಣಕ್ಕೂ ದೇಶದ ವಿರುದ್ಧ ಹೋಗುವುದಿಲ್ಲ ಏಕೆಂದರೆ ಸರ್ಕಾರಿ ಶಾಲೆ ಮಕ್ಕಳಿಗೆ ಈ ನೆಲದ ಸಂಸ್ಕೃತಿ ಪರಿಚಯವಿರುತ್ತದೆ ಎಂದು ಅಭಿಪ್ರಾಯಪಟ್ಟರು