ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ: ವಿಶೇಷ ಪೊಲೀಸ ತಂಡದಿಂದ ತನಿಖೆ

ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪೊಲೀಸ್ ತಂಡ ತನಿಖೆ ಆರಂಭಿಸಲಿದೆ ಎಂದು ವರದಿಗಳು ತಿಳಿಸಿವೆ. 

Published: 22nd February 2020 09:35 AM  |   Last Updated: 22nd February 2020 09:35 AM   |  A+A-


Special police team to probe sedition case against Kashmiri students

ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ: ವಿಶೇಷ ಪೊಲೀಸ ತಂಡದಿಂದ ತನಿಖೆ

Posted By : Manjula VN
Source : The New Indian Express

ಹುಬ್ಬಳ್ಳಿ; ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪೊಲೀಸ್ ತಂಡ ತನಿಖೆ ಆರಂಭಿಸಲಿದೆ ಎಂದು ವರದಿಗಳು ತಿಳಿಸಿವೆ. 

ಪ್ರಕರಣ ಸಂಬಂಧ ಹುಬ್ಬಳ್ಳಿ ಜಿಲ್ಲಾ ಪೊಲೀಸ್ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿದ್ದು, ಡಿಎಸ್'ಪಿ ರ್ಯಾಂಕ್ ಇರುವ ಅಧಿಕಾರಿಯ ನೇತೃತ್ವದಲ್ಲಿ ತಂಡ ತನಿಖೆ ನಡೆಸಲಿದೆ. 

ತನಿಖೆ ಹಿನ್ನೆಲೆಯಲ್ಲಿ ವಿಶೇಷ ಪೊಲೀಸ್ ತಂಡ ಬೆಳಗಾವಿಯ ಹಿಂಡಲಗ ಕೇಂದ್ರೀಯ ಕಾರಾಗೃಹಕ್ಕೆ ಶೀಘ್ರದಲ್ಲಿಯೇ ಭೇಟಿ ನೀಡಲಿದ್ದು, ಆರೋಪಿಗಳನ್ನು ವಿಚಾರಣೆ ನಡೆಸಲಿದೆ. 

ಕೆಲ ದಿನಗಳ ಹಿಂದಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗಿತ್ತು. ವಿಡಿಯೋದಲ್ಲಿ ಕಾಶ್ಮೀರದ ಮೂಲದ ಮೂವರು ಕೆಎಲ್ಇ ಕಾಲೇಜಿನ ವಿದ್ಯಾರ್ಥಿಗಳು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ್ದರು. ಇದಕ್ಕೆ ದೇಶದಾದ್ಯಂತ ತೀವ್ರ ಆಕ್ರೋಶಗಳು ವ್ಯಕ್ತವಾಗಿದ್ದವು. 

Stay up to date on all the latest ರಾಜ್ಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp