ಯಾರೂ ಇಲ್ಲದ ವೇಳೆಯಲ್ಲಿ ವಿದ್ಯಾರ್ಥಿನಿ ಮನೆಗೆ  ನುಗ್ಗಿದ ಬಿಇಒ : ಸ್ಥಳೀಯರಿಂದ ಹಲ್ಲೆ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಿಇಒ (ಕ್ಷೇತ್ರ ಶಿಕ್ಷಣಾಧಿಕಾರಿ)  ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಆರೋಪದಲ್ಲಿ ಅವರ ಮೇಲೆ ಪೋಷಕರು ಹಾಗೂ ಸ್ಥಳೀಯರು ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆ ಮುಂಡರಗಿಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗದಗ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಿಇಒ(ಕ್ಷೇತ್ರ ಶಿಕ್ಷಣಾಧಿಕಾರಿ)  ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಆರೋಪದಲ್ಲಿ ಅವರ ಮೇಲೆ ಪೋಷಕರು ಹಾಗೂ ಸ್ಥಳೀಯರು ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆ ಮುಂಡರಗಿಯಲ್ಲಿ ನಡೆದಿದೆ.

ಮುಂಡರಗಿಯ ಕ್ಷೇತ್ರ ಶಿಕ್ಷಣಾಧಿಕಾರಿ(ಬಿಇಒ) ಎಸ್.ಎನ್​.ಹಳ್ಳಿಗುಡಿ ಹಲ್ಲೆಗೊಳಗಾದ ಅಧಿಕಾರಿ. ಯಾರೂ ಇಲ್ಲದ ಸಮಯದಲ್ಲಿ ವಿದ್ಯಾರ್ಥಿನಿ ಮನೆಗೆ ನುಗ್ಗಿದ್ದಾರೆ ಎಂದು ಆರೋಪಿಸಿ ಆಕೆಯ ಪೋಷಕರು ಹಾಗೂ ಸ್ಥಳೀಯರು ಆಕ್ರೋಶಗೊಂಡಿದ್ದಾರೆ. 

ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ಪೋಷಕರು ದೂರು ದಾಖಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಇಒ ಕೂಡ ಪ್ರತಿ ದೂರು ದಾಖಲಿಸಿದ್ದಾರೆ. 

ವಿದ್ಯಾರ್ಥಿನಿ ಮನೆಗೆ ನಾನು ಪರೀಕ್ಷೆ ಬಗ್ಗೆ ಟಿಪ್ಸ್ ನೀಡಲು ಹೋಗಿದ್ದೆ, ಅದನ್ನು ನೀಡಿ ವಾಪಸ್ ಬಂದಿದ್ದೆ, ಅದಾದ ನಂತರ ನನ್ನ ಮನೆ ಹತ್ತಿರ ಬಂದು ಐದಾರು ಮಂದಿ ದುಷ್ಕರ್ಮಿಗಳು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಿಸಿದ್ದಾರೆ,

ಗಾಯಗೊಂಡ ಬಿಇಒ 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿಡಲಾಗಿತ್ತು. ಪ್ರಕರಣ ಸಂಬಂಧ ಮುಂಡರಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್,ಬಿಇಒ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಕಮಿಷನರ್ ಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com