ಪಾಕ್ ಪರ ವಿದ್ಯಾರ್ಥಿನಿಯರ ಘೋಷಣೆ: ಪೊಲೀಸ್ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ಬೊಮ್ಮಾಯಿ

ಪಾಕಿಸ್ತಾನದ ಪರ ಮೂವರು ವಿದ್ಯಾರ್ಥಿನಿಯರು ಘೋಷಣೆ ಕೂಗಿದ ಬೆನ್ನಲ್ಲೇ ರಾಜ್ಯದ ನಾನಾ ಭಾಗಗಳಲ್ಲಿ ಪ್ರತಿಭಟನೆ ನಡೆಸುವ ವೇಳೆ ಸಂಘಟನೆಗಳು ಹಾಗೂ ಸಂಘಟಿತರ ಮೇಲೆ ಹದ್ದಿನ ಕಣ್ಣಿಡಬೇಕೆಂದು ಪೊಲೀಸರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. 
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಾಕಿಸ್ತಾನದ ಪರ ಮೂವರು ವಿದ್ಯಾರ್ಥಿನಿಯರು ಘೋಷಣೆ ಕೂಗಿದ ಬೆನ್ನಲ್ಲೇ ರಾಜ್ಯದ ನಾನಾ ಭಾಗಗಳಲ್ಲಿ ಪ್ರತಿಭಟನೆ ನಡೆಸುವ ವೇಳೆ ಸಂಘಟನೆಗಳು ಹಾಗೂ ಸಂಘಟಿತರ ಮೇಲೆ ಹದ್ದಿನ ಕಣ್ಣಿಡಬೇಕೆಂದು ಪೊಲೀಸರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. 

ಕಾನೂನು ಸುವ್ಯವಸ್ಥೆ ಕುರಿತಂತೆ ಪೊಲೀಸ್ ಮಹಾ ನಿರ್ದೇಶಕರ ಕಚೇರಿ ನಡೆದ ಸಭೆಯಲ್ಲಿ ಮಾತನಾಡಿರುವ ಅವರು, ಸಮಾದದ ಸ್ವಾಸ್ಥ್ಯ ಹಾಳು ಮಾಡುವ ಸಂಘಟನೆಗಳ ಮೇಲೆ ನಿಗಾವಹಿಸುವಂತೆ ತಾಕೀತು ಮಾಡಿದ್ದಾರೆ. 

ಇತ್ತೀಚೆಹಗೆ ಕೆಲ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಮನಃಪರಿವರ್ತಿಸಿ ದೇಶ ವಿರೋಧಿ ಘೋಷಣೆ ಕೂಗುವಂತೆ ಪ್ರೇರೇಪಿಸುತ್ತಿದ್ದಾರೆ. ಯುವಜನತೆಯನ್ನು ದಿಕ್ಕುತಪ್ಪಿಸುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ಯಾವ ಯಾವ ಶಿಕ್ಷಣ ಸಂಸ್ಥೆಗಳು ಇಂತಹ ಹೀನ ಕೆಲಸ ಮಾಡುತ್ತವೆಯೋ ಅವುಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕೆಂದು ಎಚ್ಚರಿಕೆ ಕೊಟ್ಟಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com