ಪಾಕ್ ಪ್ರೇಮಿ ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ

ಪಾಕ್‌ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯಾನ್‌ಳನ್ನು ನ್ಯಾಯಾಲಯ ನಾಲ್ಕು ದಿ‌ನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.
ಅಮೂಲ್ಯ ಲಿಯೋನಾ
ಅಮೂಲ್ಯ ಲಿಯೋನಾ

ಬೆಂಗಳೂರು: ಪಾಕ್‌ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯಾನ್‌ಳನ್ನು ನ್ಯಾಯಾಲಯ ನಾಲ್ಕು ದಿ‌ನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

ಇತ್ತೀಚೆಗೆ ಫ್ರೀಡಂ ಪಾರ್ಕ್​ನಲ್ಲಿ ನಡೆದ ಸಿಎಎ ವಿರೋಧಿ ಸಮಾವೇಶದಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂದಿದ್ದ ಅಮೂಲ್ಯ‌ಳನ್ನು ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದು, ರಾತ್ರೋರಾತ್ರಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. 

ಆಕೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇದೀಗ ಈ ಪ್ರಕರಣದ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಆಕೆಯನ್ನು 4 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ.

ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಅಮೂಲ್ಯಾಳನ್ನು ಬಿಗಿ ಪೊಲೀಸ್‌ ಭದ್ರತೆಯಲ್ಲಿ ಸಂಜೆ 7 ಗಂಟೆ ಸುಮಾರಿಗೆ ನ್ಯಾಯಾಧಿಶರ ಮುಂದೆ ಹಾಜರುಪಡಿಸಿ ಎಸ್‌ಐಟಿ ನಾಲ್ಕು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ. ಇದಕ್ಕೂ ಮೊದಲು ಮಂಗಳವಾರ ಬೆಳಗ್ಗೆ ಐದನೇ ಎಸಿಎಂಎಂ ನ್ಯಾಯಾ ಲಯಕ್ಕೆ ಅರ್ಜಿ ಸಲ್ಲಿಸಿ, 10 ದಿನ ವಶಕ್ಕೆ ನೀಡುವಂತೆ ಎಸ್‌ಐಟಿ ಮನವಿ ಮಾಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com