ಸಿಎಎ ಪ್ರತಿಭಟನೆಗೆ ಹೊತ್ತಿ ಉರಿದ ದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಲಿ ಎಂದ ಸಿಟಿ ರವಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗೆ ರಾಷ್ಟ್ರ ರಾಜಧಾನಿ ದೆಹಲಿ ಉರಿಯುತ್ತಿದ್ದು,  ಈ ನಡುವಲ್ಲೇ ದೇಶದಲ್ಲಿ ಏಕರೂಪ ನಾಗರೀಕ ಸಂಹಿತೆ ಜಾರಿಗೆ ತರಲು ಇದು ಸಕಾಲವಾಗಿದೆ ಎಂದು ಕನ್ನಡ-ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿಟಿ. ರವಿಯವರು ಹೇಳಿದ್ದಾರೆ. 
ಸಿಟಿ ರವಿ
ಸಿಟಿ ರವಿ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗೆ ರಾಷ್ಟ್ರ ರಾಜಧಾನಿ ದೆಹಲಿ ಉರಿಯುತ್ತಿದ್ದು,  ಈ ನಡುವಲ್ಲೇ ದೇಶದಲ್ಲಿ ಏಕರೂಪ ನಾಗರೀಕ ಸಂಹಿತೆ ಜಾರಿಗೆ ತರಲು ಇದು ಸಕಾಲವಾಗಿದೆ ಎಂದು ಕನ್ನಡ-ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿಟಿ. ರವಿಯವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭಾರತೀಯ ಜನತಾ ಪಕ್ಷದ ಮೊದಲ ಪ್ರಣಾಳಿಕೆಯಲ್ಲಿನ ಅಂಶವಾಗಿರುವ ಸಮಾನ ನಾಗರೀಕ ಸಂಹಿತೆ ಜಾರಿಗೆ ತರಲು ಕಾಲ ಈಗ ಪಕ್ವವಾಗಿದೆ. ಬಿಜೆಪಿ ಗರ್ಭದಲ್ಲಿರುವ ಸಮಾನ ನಾಗರೀಕ ಸಂಹಿತೆ ಮಗು ಜನನಕ್ಕೆ ಸೂಕ್ತ ಕಾಲ ಬಂದಿದೆ ಎಂದು ಹೇಳಿದ್ದಾರೆ. 

ಸಿಎಎ ವಿರೋಧಿ ಹೋರಾಟಗಳಿಂದಾಗಿ ಪ್ರತಿಯೊಬ್ಬರೂ ಗಟ್ಟಿ ಧ್ನನಿಯಲ್ಲಿ ಸಮಾನತೆ ಪ್ರತಿಪಾದನೆ ಮಾಡುತ್ತಿದ್ದಾರೆ. ಧಾರ್ಮಿಕ ಅಸಮಾನತೆ ಪ್ರತಿಪಾದಿಸುತ್ತಿದ್ದವರೇ ಇದೀಗ ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂದು ಒತ್ತಾಯಿಸುವ ಮೂಲಕ ಧಾರ್ಮಿಕ ಸಮಾನತೆ ಪ್ರತಿಪಾದನೆ ಮಾಡುತ್ತಿದ್ದಾರೆ. ಹೀಗಾಗಿ ಬಿಜೆಪ ಮೂಲ ಉದ್ದೇಶವಾಗಿರುವ ಸಮಾನ ನಾಗರೀಕ ಸಂಹಿತೆ ಜಾರಿಗೆ ತರಲು ಕಾಲ ಪಕ್ವವಾಗಿದೆ ಎಂದು ತಿಳಿಸಿದ್ದಾರೆ. 

ಸಮಾನ ನಾಗರಿಕ ಸಂಹಿತೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ ಹುಟ್ಟು ಪಡೆದ 1980ರ ಪ್ರಣಾಳಿಕೆಯಲ್ಲೇ ಸ್ಪಷ್ಟವಾಗಿ ಹೇಳಿದ್ದೇವೆ. 2014 ಹಾಗೂ 2019ರ ಲೋಕಸಭೆ ಚುನಾವಣೆಯ ಪ್ರಣಾಳಿಕೆಯ ಪ್ರಮುಖ ಅಂಶವೂ ಆಗಿದೆ. ಇಷ್ಟು ದಿನ ಅಸಮಾನತೆ ಪ್ರತಿಪಾದಿಸುತ್ತಿದ್ದವರು, ಮಾತನಾಡುತ್ತಿದ್ದವರು ಈಗ ತ್ರಿವರ್ಣ ಧ್ವಜ ಹಿಡಿದು ನಾವೆಲ್ಲಾ ಒಂದೇ ಎನ್ನುತ್ತಿದ್ದಾರೆ. ಭಾರತ್ ಮಾತಾಕಿ ಜೈ ಬಿಜೆಪಿಗೆ ಮಾತ್ರವೇ ಗುತ್ತಿಗೆಗೆ ಕೊಟ್ಟಂತಿದ್ದವರು ಘೋಷಣೆ ಹಾಕುತ್ತಿದ್ದಾರೆ. ಹೀಗಾಗಿ ಕಾಲ ಪಕ್ವವಾಗಿದೆ ಎನಿಸುತ್ತಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com