ಮೈಸೂರು: ಸರ್ಕಾರಿ ಶಾಲೆಯಲ್ಲಿ ಹಾಲು ಕುಡಿದ 25 ವಿದ್ಯಾರ್ಥಿಗಳು ಅಸ್ವಸ್ಥ!

ಶಾಲೆಯಲ್ಲಿ ಹಾಲು ಕುಡಿದ ಸುಮಾರು 25 ಮಕ್ಕಳು ಅಸ್ವಸ್ಥರಾದ ಘಟನೆ ಹುಣಸೂರು ತಾಲೂಕಿನ ಕಿರಂಗೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಬುಧವಾರ ನಡೆದಿದೆ
ವಿದ್ಯಾರ್ಥಿಗಳು
ವಿದ್ಯಾರ್ಥಿಗಳು

ಮೈಸೂರು: ಶಾಲೆಯಲ್ಲಿ ಹಾಲು ಕುಡಿದ ಸುಮಾರು 25 ಮಕ್ಕಳು ಅಸ್ವಸ್ಥರಾದ ಘಟನೆ ಹುಣಸೂರು ತಾಲೂಕಿನ ಕಿರಂಗೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಬುಧವಾರ ನಡೆದಿದೆ

ಹಾಲು ಕುಡಿದ ಬಳಿಕ ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಹನಗೊಂದುವಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಹುಣಸೆಹಣ್ಣು ಮತ್ತು ಮರ ಸೇಬಿನ ಬೀಜಗಳ ಸೇವನೆಯು ವಿದ್ಯಾರ್ಥಿಗಳು ಅಸ್ವಸ್ಥರಾಗಲು ಕಾರಣವಾಗಿದೆ. ಮೂವರು ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡ ಬಳಿಕ ಎಲ್ಲಾ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು  ಎಂದು ಆಸ್ಪತ್ರೆಯ ಸಿಬ್ಬಂದಿಗಳು ತಿಳಿಸಿದ್ದಾರೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಬಿಇಒ ನಾಗರಾಜ್, ಪರಿಶೀಲನೆ ನಡೆಸಿದರು. ಇತರ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳು ಈಗ ಕ್ಷೇಮವಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com