ಖ್ಯಾತ ಇತಿಹಾಸಕಾರ ಷಡಕ್ಷರಿ ಷೆಟ್ಟರ್ ನಿಧನ

ಖ್ಯಾತ ಇತಿಹಾಸಕಾರ ಷಡಕ್ಷರಿ ಷೆಟ್ಟರ್ ಶುಕ್ರವಾರ ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಷ. ಷೆಟ್ಟರ್
ಷ. ಷೆಟ್ಟರ್

ಬೆಂಗಳೂರು: ಖ್ಯಾತ ಇತಿಹಾಸಕಾರ ಷಡಕ್ಷರಿ ಷೆಟ್ಟರ್ ಶುಕ್ರವಾರ ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬನ್ನೇರುಘಟ್ಟ ರಸ್ತೆಯ ಸಾಗರ್ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆ ಸೇರಿದಂತೆ ಇತರ ಕೆಲವು ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು. ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು, ಉಸಿರಾಟಕ್ಕೆ ಸಮಸ್ಯೆಯಾಗಿತ್ತು. ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳು ಅಪಾರ ಬಂಧುಬಳಗವನ್ನು ಅವರು ಅಗಲಿದ್ದಾರೆ. ಭೂಪಸಂದ್ರದ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಅಂತ್ಯಕ್ರಿಯೆ ಬಗ್ಗೆ ಈವರೆಗೆ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಕುಟುಂಬದ ಮೂಲಗಳು ಹೇಳಿವೆ. ಹೊಸಕೋಟೆಯಲ್ಲಿ ಅವರಿಗೆ ಸೇರಿದ ಜಾಗ ಅಥವಾ ಚಾಮರಾಜಪೇಟೆಯ ಚಿತಾಗಾರದಲ್ಲಿ ಲಿಂಗಾಯತ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 

ಇನ್ನು  ಷಡಕ್ಷರಿ ಷಟ್ಟರ್ ಅವರ ಸಾವಿಗೆ ಗಣ್ಯರು ಕಂಬನಿ ಮಿಡಿದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರೂ ಕೂಡ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com