ಮನೆ ಮನೆಗೆ ತೆರಳಿ ಸಿಎಎ ವಿರೋಧಿಸಿ ಪ್ರಚಾರ ಮಾಡಿ: ಸಿದ್ದರಾಮಯ್ಯ ಕರೆ

ಕೇಂದ್ರ ಸರ್ಕಾರ ಸಿಎಎ ಹಾಗೂ ಎನ್‍ಪಿಆರ್ ಜಾರಿಗೊಳಿಸುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಚಾರ ಮಾಡಬೇಕು ಎಂದು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಸಿಎಎ ಕುರಿತ ವಿಚಾರ ಸಂಕಿರಣದಲ್ಲಿ ಸಿದ್ದರಾಮಯ್ಯ
ಸಿಎಎ ಕುರಿತ ವಿಚಾರ ಸಂಕಿರಣದಲ್ಲಿ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಸಿಎಎ ಹಾಗೂ ಎನ್‍ಪಿಆರ್ ಜಾರಿಗೊಳಿಸುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಚಾರ ಮಾಡಬೇಕು ಎಂದು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ವಿಜಯನಗರ ಕಾಸಿಯಾ ಸಭಾಂಗಣದಲ್ಲಿ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಸಂವಿಧಾನ ಮತ್ತು ಪೌರತ್ವ ಕಾಯಿದೆ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು #'ಬಿಜೆಪಿಯವರು ಮನೆಮನೆಗೆ ತೆರಳಿ ಸುಳ್ಳು ಹೇಳಿ ಜನರನ್ನು ನಂಬಿಸುವ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಕಾಯಿದೆ ವಿರೋಧದ ಬಗ್ಗೆ ಜನರಲ್ಲಿ ಜಾಗೃತಿ ಮತ್ತು ಪ್ರಚಾರ ಮೂಡಿಸುವ ಕೆಲಸವನ್ನು ಪಕ್ಷಮಾಡಬೇಕು ಎಂದು ಹೇಳಿದರು.

'ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿ ಬಿಜೆಪಿಯ ಎಲ್ಲರೂ ಸುಳ್ಳು ಹೇಳಲು ಆರಂಭಿಸಿದ್ದಾರೆ. ಅವರ ಬಣ್ಣ ಬಯಲು ಮಾಡಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಬೇಕು. ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದನ್ನು ನಿಯಂತ್ರಿಸುವ ಕಾರ್ಯ ಆಗುತ್ತಿಲ್ಲ. ಗಲಭೆಯಲ್ಲಿ 35 ಮೃತಪಟ್ಟಿದ್ದು, ಗಲಭೆಯನ್ನು ಪ್ರಶ್ನಿಸಿದ ನ್ಯಾಯಮೂರ್ತಿಯನ್ನೇ ವರ್ಗಾವಣೆ ಮಾಡಿದ್ದಾರೆ. ಆರ್‌ಎಸ್‍ಎಸ್ ಗೂಂಡಾಗಳು ಪೊಲೀಸ್ ಸಮವಸ್ತ್ರ ಧರಿಸಿ ಜೆಎನ್‍ಯು ವಿವಿ ಒಳಗೆ ತೆರಳಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದಾರೆ. ಆದರೆ ಇದರ ತನಿಖೆ ಆಗಿಲ್ಲ. ನಮ್ಮದು ಜಾತ್ಯತೀತ ರಾಷ್ಟ್ರ. ಇದನ್ನು ಮನುವಾದಿ ರಾಷ್ಟ್ರ ಮಾಡಲು ಬಿಜೆಪಿಯವರು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com