ಇಂದಿರಾ ಕ್ಯಾಂಟೀನ್ ಊಟ, ತಿಂಡಿ ದರ ಹೆಚ್ಚಳಕ್ಕೆ ಬಿಬಿಎಂಪಿ ಪರಿಶೀಲನೆ?

ಸಿದ್ದರಾಮಯ್ಯ ನೇತೃತ್ವ ಹಿಂದಿನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಹಲವು ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್ ಬಹು ಜನಪ್ರಿಯವಾಗಿದ್ದ ಯೋಜನೆ. ನಾಗರಿಕರಿಗೆ ಕಡಿಮೆ ದರದಲ್ಲಿ ಪೂರೈಕೆ ಮಾಡುವ ಊಟ, ತಿಂಡಿ ಬಡವರ ಹಸಿವನ್ನು ನೀಗಿಸುತ್ತಿದೆ
ಇಂದಿರಾ ಕ್ಯಾಂಟೀನ್
ಇಂದಿರಾ ಕ್ಯಾಂಟೀನ್

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವ ಹಿಂದಿನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಹಲವು ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್ ಬಹು ಜನಪ್ರಿಯವಾಗಿದ್ದ ಯೋಜನೆ. ನಾಗರಿಕರಿಗೆ ಕಡಿಮೆ ದರದಲ್ಲಿ ಪೂರೈಕೆ ಮಾಡುವ ಊಟ, ತಿಂಡಿ ಬಡವರ ಹಸಿವನ್ನು ನೀಗಿಸುತ್ತಿದೆ

ಪೌರ ಕಾರ್ಮಿಕರು, ಕೂಲಿ ಕಾರ್ಮಿಕರು, ಆಟೋ ಚಾಲಕರು, ವಿದ್ಯಾರ್ಥಿಗಳು, ಹಾಗೂ ಹೊರ ರಾಜ್ಯದಿಂದ ಬರುವ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯಿಂದ ಸಾಕಷ್ಟು ಉಪಯೋಗವಾಗುತ್ತಿದೆ

ಆದರೆ, ಇಂದಿರಾ ಕ್ಯಾಂಟೀನ್ ಊಟ, ತಿಂಡಿ ದರ ಏರಿಕೆ ಮಾಡಲು ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ಪ್ರಯತ್ನ ಆರಂಭಿಸಿ ಎಂದು ಹೇಳಲಾಗಿದೆ.

ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ಗೆ ಅನುದಾನ ಒದಗಿಸದ ಕಾರಣ, ಇಂದಿರಾ ಕ್ಯಾಂಟೀನ್ ಊಟ, ಉಪಹಾರದ ದರ ಏರಿಕೆಗೆ ಮುಂದಾಗಿದೆ ಎನ್ನಲಾಗಿದ್ದು, ಪ್ರಸ್ತುತ ಇರುವ ಊಟದ ದರವನ್ನು ೧೦ ರಿಂದ ೧೫ ರೂ.ಗೆ, ಉಪಹಾರದ ದರವನ್ನು ೫ ರಿಂದ ೧೦ ರೂ.ಗೆ ಹೆಚ್ಚಿಸುವ ಸಾಧ್ಯತೆಗಳು ಇವೆ ಎನ್ನಲಾಗಿದೆ.

ಹೊಸ ಗುತ್ತಿಗೆ ಜೊತೆಗೆ ನೂತನ ದರಗಳನ್ನು ಜಾರಿಗೊಳಿಸಲು ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ಗಂಭೀರವಾಗಿ ಪರಿಶೀಲಿಸುತ್ತಿದೆ ಎಂದು ಉನ್ನತ ಮೂಲಗಳು ಹೇಳಿವೆ. ಇಂದಿರಾ ಕ್ಯಾಂಟೀನ್ ಗೆ ಸರ್ಕಾರ ಅನುದಾನ ನೀಡದ ಕಾರಣ ಸರ್ಕಾರದ ಹೊರೆ ಇಳಿಸಲು ಮುಂದಾಗಿರುವ ಬಿಬಿಎಂಪಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com