ಪ್ರಧಾನಿ ತುಮಕೂರು ಭೇಟಿಗೆ ಸಿದ್ಧತೆ ಪೂರ್ಣ: ಪ್ರಹ್ಲಾದ್ ಜೋಷಿ

ತುಮಕೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಬುಧವಾರ ತಿಳಿಸಿದ್ದಾರೆ.

Published: 01st January 2020 09:55 PM  |   Last Updated: 01st January 2020 09:55 PM   |  A+A-


Minister Prahlad Joshi

ಸಂಗ್ರಹ ಚಿತ್ರ

Posted By : Srinivasamurthy VN
Source : UNI

ತುಮಕೂರು: ತುಮಕೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಬುಧವಾರ ತಿಳಿಸಿದ್ದಾರೆ.

ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೋಶಿ, ಪ್ರಧಾನಮಂತ್ರಿ ಮೋದಿ ಮೊದಲು ಸಿದ್ದಗಂಗ ಮಠಕ್ಕೆ ಭೇಟಿ ನೀಡಲಿದ್ದು, ಸಿದ್ದಗಂಗ ಮಠದ ದಿವಂಗತ ಶಿವಕುಮಾರ ಸ್ವಾಮೀಜಿ ವಿಶ್ರಾಂತಿ ಪಡೆಯುತ್ತಿರುವ ಗದ್ದುಗೆಗೆ ಪೂಜೆ ನಡೆಸಲಿದ್ದಾರೆ. ಬಳಿಕ ಮಠದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾರೆ ಎಂದು ತಿಳಿಸಿದರು.

ನಂತರ ಮೋದಿ ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಯೋಜನೆಯ ನಾಲ್ಕನೇ ಕಂತು ಫಲಾನುಭವಿಗಳಿಗೆ ವಿತರಣೆ ಮಾಡಲಿದ್ದಾರೆ.

ಕೃಷಿಯಲ್ಲಿನ ನವೀನ ಕೌಶಲ್ಯಕ್ಕಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸಲ್ಪಟ್ಟ 32 ಪ್ರಗತಿಪರ ರೈತರಿಗೆ ಕಾರ್ಯಕ್ರಮದಲ್ಲಿ ಪ್ರಧಾನಿ ಕೃಷಿ ಕರ್ಮಣ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಜೋಶಿ ಹೇಳಿದರು. ಕರ್ನಾಟಕಕ್ಕೆ ಮೂರನೇ ಬಹುಮಾನ ದೊರೆತಿದ್ದು, ಪ್ರಶಸ್ತಿಯನ್ನು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp