ಹೊಸ ವರ್ಷಾಚರಣೆ ವೇಳೆ ಮದ್ಯಪಾನ ಮಾಡಿ ವಾಹನ ಚಾಲನೆ, ಒಂದೇ ದಿನ 426 ಪ್ರಕರಣ ದಾಖಲು

ಹೊಸ ವರ್ಷ ಸಂಭ್ರಮಾಚರಣೆ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು ಎಂದು ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದರೂ, ಒಂದೇ ದಿನ ನಗರದಲ್ಲಿ 426 ಡ್ರಂಕ್ ಆಂಡ್ ಡ್ರೈವ್ ದೂರು ದಾಖಲಾಗಿವೆ. 

Published: 01st January 2020 03:20 PM  |   Last Updated: 01st January 2020 03:20 PM   |  A+A-


Drink and Drive

ಸಾಂದರ್ಭಿಕ ಚಿತ್ರ

Posted By : Lingaraj Badiger
Source : UNI

ಬೆಂಗಳೂರು: ಹೊಸ ವರ್ಷ ಸಂಭ್ರಮಾಚರಣೆ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು ಎಂದು ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದರೂ, ಒಂದೇ ದಿನ ನಗರದಲ್ಲಿ 426 ಡ್ರಂಕ್ ಆಂಡ್ ಡ್ರೈವ್ ದೂರು ದಾಖಲಾಗಿವೆ. 

ಪೂರ್ವ ವಿಭಾಗದಲ್ಲಿ 99, ಪಶ್ಚಿಮ ವಿಭಾಗದಲ್ಲಿ 254, ಉತ್ತರ ವಿಭಾಗದಲ್ಲಿ 73 ಸೇರಿ ಒಟ್ಟು 426 ಮಂದಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಬಗ್ಗೆ ದೂರು ದಾಖಲಾಗಿದ್ದು, ಪೊಲೀಸರು 426 ವಾಹನಗಳನ್ನು ಜಪ್ತಿಮಾಡಿಕೊಂಡು, ಚಾಲಕರಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ದಾಖಲಾದ 426 ದೂರುಗಳಲ್ಲಿ ಪೊಲೀಸರು ಅಂದಾಜು 42.60 ಲಕ್ಷ ರೂ ದಂಡ ವಸೂಲಿ ಮಾಡಬೇಕಾಗುತ್ತದೆ.

ನಗರದಲ್ಲಿಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿ, ಹೊಸ ವರ್ಷಾಚರಣೆ  ಸಂಭ್ರಮದ ವೇಳೆ ಕೆಲವರು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನೂ ಈ ವೇಳೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದ್ದು, ಈ ಬಗ್ಗೆ ಸಮಗ್ರವಾಗಿ ಮಾಹಿತಿ ಪಡೆದು, ಕಠಿಣ ಕ್ರಮ ಜರುಗಿಸುವುದಾಗಿ ಅವರು ತಿಳಿಸಿದರು. 

ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಮಾತನಾಡಿ, ನಿನ್ನೆ ಹೊಸ ವರ್ಷಾಚರಣೆ ಸಂಭ್ರಮ ವೇಳೆ ಅಹಿತಕರ ಘಟನೆಗಳು ನಡೆದಿದ್ದರೆ, ಕಠಿಣ ಕ್ರಮ ಕೈಗೊಳ್ಳುತ್ತೇವೆ. ಆದರೆ, ಈವರೆಗೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದರು. 

ಈ ಬಾರಿ ಸೇಫ್ಟಿ ಲ್ಯಾಂಡ್ ಹೆಚ್ಚು ಉಪಯೋಗಕಾರಿಯಾಗಿತ್ತು. ನಿನ್ನೆ ಸಂಭ್ರಮಾಚರಣೆಯಲ್ಲಿ ಮೂರೂವರೇ ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು ಎಂದರು. 

ಹೊಸ ವರ್ಷಾಚರಣೆ ವೇಳೆ ಎಲ್ಲಾ ರೀತಿಯ ಭದ್ರತೆ ನೀಡಲಾಗಿದ್ದು, ನಮಗಿರುವ ಮಾಹಿತಿ ಪ್ರಕಾರ ಎಲ್ಲವೂ ಸುಸೂತ್ರವಾಗಿ ನಡೆದಿದೆ ಎಂದರು. 

ನಿನ್ನೆ ರಾತ್ರಿ ಪೊಲೀಸ್, ಸಂಚಾರ ಪೊಲೀಸ್, ಕೆಎಸ್‌ಆರ್‌ಪಿ, ಸಿವಿಲ್ ಡಿಫೆನ್ಸ್‌, ಟ್ರಾಫಿಕ್ ವಾರ್ಡನ್‌ ಸಿಬ್ಬಂದಿ ಕಾರ್ಯನಿರ್ವಹಿಸಿದ್ದಾರೆ. ಹೊಸ ವರ್ಷಾಚರಣೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರು ಸೂಚನೆ ನೀಡಿದ್ದರು. ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದ ನಗರವಾಗಿದೆ. ಆದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿತ್ತು ಎಂದು ವಿವರಿಸಿದರು.

ಬ್ರಿಗೇಡ್ ರೋಡ್, ಎಂ.ಜಿ.ರಸ್ತೆಗಿಂತ ಕೋರಮಂಗಲದಲ್ಲಿ ಹೆಚ್ಚಿನ ಜನಸಂದಣಿ ಇತ್ತು. ಅಧಿಕಾರಿಗಳಿಗೆ ಕೂಡ ನಾವು ತಾಳ್ಮೆಯಿಂದ ಸಮಸ್ಯೆ ನಿಭಾಯಿಸುವಂತೆ ಸೂಚಿಸಿದ್ದೆವು. ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ವಿಶೇಷವಾಗಿ ಎಎಸ್‌ಐಗಳು ಚೆನ್ನಾಗಿ ಕೆಲಸ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಕಾ ಕ್ರಮವನ್ನು ಕೈಗೊಳ್ಳಲಾಗಿತ್ತು ಎಂದು ಆಯುಕ್ತರು ತಿಳಿಸಿದರು.

ನಮಗೆ ಬಂದಿರುವ ಮಾಹಿತಿ ಪ್ರಕಾರ ಎಲ್ಲವೂ ಶಾಂತಿಯುತವಾಗಿ ಮುಗಿದಿದೆ.

Stay up to date on all the latest ರಾಜ್ಯ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp