ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್'ಗೆ ಇಂದು ಪ್ರಧಾನಿ ಮೋದಿ ಚಾಲನೆ

ರಾಷ್ಟ್ರದಲ್ಲಿ ವಿಜ್ಞಾನದ ಅಭಿವೃದ್ಧಿಗೆ ಉತ್ತೇಜನ ನೀಡುವ ಸಂಬಂಧ ನಗರದಲ್ಲಿ ಆಯೋಜಿಸಲಾಗಿರುವ ಪ್ರತಿಷ್ಠಿತ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನವನ್ನು ಶುಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಲಿದ್ದಾರೆ. 
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಜಿಕೆವಿಕೆ ಆವರಣದಲ್ಲಿ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನ
ಬೆಂಗಳೂರು:
ರಾಷ್ಟ್ರದಲ್ಲಿ ವಿಜ್ಞಾನದ ಅಭಿವೃದ್ಧಿಗೆ ಉತ್ತೇಜನ ನೀಡುವ ಸಂಬಂಧ ನಗರದಲ್ಲಿ ಆಯೋಜಿಸಲಾಗಿರುವ ಪ್ರತಿಷ್ಠಿತ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನವನ್ನು ಶುಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಲಿದ್ದಾರೆ. 

5 ದಿನಗಳ ವಿಜ್ಞಾನ ಜಾತ್ರೆಗೆ ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣವು ಸಕಲ ರೀತಿಯಲ್ಲಿ ಸಜ್ಜಾಗಿದ್ದು, ಸಮ್ಮೇಳನ ಹಿನ್ನೆಲೆಯಲ್ಲಿ ಜಿಕೆವಿಕೆ ಆವರಣದಲ್ಲಿ ಗುರುವಾರ ವಿಜ್ಞಾನ ಜ್ಯೋತಿ ಜಾಥಾ ನಡೆಸಲಾಯಿತು. 

ಇಂದು ಬೆಳಿಗ್ಗೆ 10 ಗಂಟೆಗೆ ಪ್ರದಾನಿ ಮೋದಿ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಸೇರಿದಂತೆ ಇತರೆ ಗಣ್ಯರು ಭಾಗವಹಿಸಲಿದ್ದಾರೆ. 

ಗುರುವಾರ ನಗರಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರು ತುಮಕೂರಿನ ಸಮಾರಂಭ ಮುಗಿಸಿ ಬೆಂಗಳೂರಿನ ರಾಜಭವನದಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ವಿಜ್ಞಾನ ಸಮ್ಮೇಳನ ಉದ್ಘಾಟನೆ ಬಳಿಕ ದೆಹಲಿಗೆ ತೆರಳಿದ್ದಾರೆ. 

5 ದಿನಗಳ ಕಾಲ ನಡೆಯುವ ವಿಜ್ಞಾನ ಜಾತ್ರೆಯ ಪ್ರೈಡ್ ಆಫ್ ಇಂಡಿಯಾ ಶೀರ್ಷಿಕೆಯಡಿಯಲ್ಲಿ ಜರುಗಲಿದೆ. ವಿಜ್ಞಾನ ವಸ್ತು ಪ್ರದರ್ಶನ, ಉಪನ್ಯಾಸಗಳು ಜರುಗಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com