ಕರಾವಳಿ ಉತ್ಸವ: ‘ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ’ ಪ್ರಮುಖ ಆಕರ್ಷಣೆ

ಈ ತಿಂಗಳ 10ರಿಂದ 19ರವರೆಗೆ ನಡೆಯುವ ಕರಾವಳಿ ಉತ್ಸವದಲ್ಲಿ ‘ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ’ ಪ್ರಮುಖ ಆಕರ್ಷಣೆಯಾಗಲಿದೆ.

Published: 04th January 2020 02:01 PM  |   Last Updated: 04th January 2020 02:01 PM   |  A+A-


Representational image

ಕರಾವಳಿ ಉತ್ಸವದ ಸಾಂದರ್ಭಿಕ ಚಿತ್ರ

Posted By : Sumana Upadhyaya
Source : UNI

ಮಂಗಳೂರು: ಈ ತಿಂಗಳ 10ರಿಂದ 19ರವರೆಗೆ ನಡೆಯುವ ಕರಾವಳಿ ಉತ್ಸವದಲ್ಲಿ ‘ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ’ ಪ್ರಮುಖ ಆಕರ್ಷಣೆಯಾಗಲಿದೆ.


ದಕ್ಷಿಣ ಕನ್ನಡ ಜಿಲ್ಲಾಡಳಿತ ಆಯೋಜಿಸಿರುವ ಕರಾವಳಿ ಉತ್ಸವ ಕದ್ರಿ ಪಾರ್ಕ್, ಪಣಂಬೂರು ಬೀಚ್ ಮತ್ತು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದ್ದು, ಉತ್ಸವದ ಅಂಗವಾಗಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧು ರೂಪೇಶ್ ಶನಿವಾರ ತಿಳಿಸಿದ್ದಾರೆ.


ಸ್ಥಳೀಯ, ವಿವಿಧ ರಾಜ್ಯಗಳ ಮತ್ತು ವಿದೇಶಗಳ ಕಲಾವಿದರು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ. ಸಾಂಸ್ಕøತಿಕ ಕಾರ್ಯಕ್ರಮಗಳು ಕದ್ರಿ ಪಾರ್ಕ್ ಮತ್ತು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿವೆ. ನೆಹರು ಮೈದಾನದಿಂದ ಸಾಂಸ್ಕøತಿಕ ಮೆರವಣಿಗೆ ನಡೆಯುವುದರೊಂದಿಗೆ ಕರಾವಳಿ ಉತ್ಸವ ಮೈದಾನದಲ್ಲಿ ಉತ್ಸವದ ಉದ್ಘಾಟನೆ ನಡೆಯಲಿದೆ.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp