ಮಡಿಕೇರಿ: ಸಹೋದರಿಯರಿಬ್ಬರ ಮೇಲೆ ಕಾಡಾನೆ ದಾಳಿ

ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ಸಹೋದರಿಯರಿಬ್ಬರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಇಂಜಿಲಗೆರೆ ಬಳಿ ನಡೆದಿರುವುದಾಗಿ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಮಡಿಕೇರಿ: ಸಹೋದರಿಯರಿಬ್ಬರ ಮೇಲೆ ಕಾಡಾನೆ ದಾಳಿ

ಮಡಿಕೇರಿ: ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ಸಹೋದರಿಯರಿಬ್ಬರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಇಂಜಿಲಗೆರೆ ಬಳಿ ನಡೆದಿರುವುದಾಗಿ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ನಾಲ್ಕನೇ ತರಗತಿಯ ನಿತ್ಯಶ್ರೀ, ತನ್ನ ತಂಗಿ ಯುವಶ್ರೀಯೊಂದಿಗೆ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಘಟನೆ ನಡೆದಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿನಿಯರು ಪುಲಿಯೇರಿ ಗ್ರಾಮದ ಶಾಲಾ ಎಸ್ಟೇಟ್ ಲೈನ್ ಮನೆಯ ನಿವಾಸಿ ಮಣಿ ಎಂಬುವರ ಪುತ್ರಿಯರು ಎಂದು ತಿಳಿದುಬಂದಿದೆ.


ಒಂಟಿ ಸಲಗ ಯುವಶ್ರೀಯನ್ನು ತನ್ನ ಸೊಂಡಿಲಿನಿಂದ ಎತ್ತಿ ಬೀಳಿಸಿತು. ಈ ಮಧ್ಯೆ ಆನೆ ದಾಳಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಆಕೆಯ ಅಕ್ಕ ನಿತ್ಯಶ್ರೀ ಕೆಳಗೆ ಬಿದ್ದು ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಸೋದರಿಯರು ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆನೆಗಳನ್ನು ಅರಣ್ಯಕ್ಕೆ ಓಡಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

ವಿರಾಜ್‌ಪೇಟೆ ಎಸಿಎಫ್ ರೋಶ್ನಿ ಮಾತನಾಡಿ, ಅರಣ್ಯ ಇಲಾಖೆ ಸಿಬ್ಬಂದಿ ಇಂಜಿಲಗರೆ ಮತ್ತು ಪುಲಿಯೇರಿಯಲ್ಲಿ ಕಾಫಿ ತೋಟಗಳಲ್ಲಿ ದಾರಿ ತಪ್ಪಿದ ಆನೆಗಳನ್ನು ಮರಳಿ ಅರಣ್ಯಕ್ಕೆ ಓಡಿಸುವ ಕಾರ್ಯಾಚರಣೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com